HEALTH TIPS

ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸ

              ನವದೆಹಲಿ: ಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ. 


               ಇದುವರೆಗೂ ಭಾರತದಲ್ಲಿ 4 ಒಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ದ. ಆಫ್ರಿಕಾದಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾದ ದಿನದಿಂದ ಕೊರೊನಾ ಲಸಿಕೆ ಹಂಚಿಕೆ ವೇಗ ಪಡೆದುಕೊಂಡಿದೆ.

               ಭಾರತ ಎರಡು ತಿಂಗಳ ಹಿಂದೆ ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಲಸಿಕೆ ನೀಡಿದ ಹೆಸರಿಗೆ ಪಾತ್ರವಾಗಿತ್ತು. ಇದೀಗ ಮತ್ತೆ 1 ಕೋಟಿ ಡೋಸ್ ಲಸಿಕೆ ಪೂರೈಸಿರುವುದನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries