HEALTH TIPS

ವಿಶ್ವ ಮಾನವ ಹಕ್ಕುಗಳ ದಿನ 2021: ಉದ್ದೇಶ, ಇತಿಹಾಸ, ಮಹತ್ವ

         ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳನ್ನು ಪಾಲನೆ ಮಾಡುವ ವಿಧಾನವಾಗಿದೆ. ಇಂದು ವಿಶ್ವ ಮಾನವ ಹಕ್ಕುಗಳ ದಿನ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ಜಗತ್ತಿನೆಲ್ಲೆಡೆ ಡಿಸೆಂಬರ್‌ 10 ಅನ್ನು 'ವಿಶ್ವ ಮಾನವ ಹಕ್ಕುಗಳ ದಿನ'ವಾಗಿ ಆಚರಿಸಲಾಗುತ್ತದೆ. 

           ವಿಶ್ವಸಂಸ್ಥೆ ಮಾನವ ಹಕ್ಕುಗಳನ್ನು ಘೋಷಿಸಿದ ಸಂದರ್ಭ ಭಾರತದಲ್ಲಿ ಸಂವಿಧಾನ ರಚನಾ ಪ್ರಕ್ರಿಯೆ ನಡೆಯುತ್ತಿತ್ತು. ವಿಶ್ವಸಂಸ್ಥೆಯ ಈ ನಿರ್ಧಾರದಿಂದ ಪ್ರೇರಣೆ ಪಡೆದು ದೇಶದ ಸಂವಿಧಾನದ ಪ್ರಸ್ತಾವನೆ ಸಹಿತ, ಅನುಚ್ಛೇದದಲ್ಲಿಯೂ ಮಾನವ ಹಕ್ಕುಗಳ ಬಗ್ಗೆ ಉಲ್ಲೇಖಿಸಲಾಗಿದೆ. ಭಾರತ ಸಂವಿಧಾನದ ಅನುಚ್ಛೇದ 32ರ ಅನುಸಾರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಅನುಚ್ಛೇದ 226ರ ಪ್ರಕಾರ ಜಾರಿಗೊಳಿಸುವ ಜವಾಬ್ದಾರಿಯನ್ನು ನ್ಯಾಯಾಂಗಕ್ಕೆ ವಹಿಸಲಾಗಿದೆ.

          ಮಾನವ ಹಕ್ಕುಗಳು ಯಾವುವು: ಮಾನವ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಮಾನವ ಹಕ್ಕುಗಳ ದಿನವನ್ನು ಘೋಷಿಸಲಾಯಿತು. ಈ ದಿನದಂದು ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಗೆ ಸಂಬಂಧಿಸಿದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ.
            ಜೀವಿಸುವುದು, ವಾಕ್‌ ಸ್ವಾತಂತ್ರ್ಯ, ಆಹಾರ, ಶಿಕ್ಷಣ, ಸಾಮಾಜಿಕ ಭದ್ರತೆ, ಸಂಘಟನೆ, ರಾಷ್ಟ್ರೀಯತೆ, ರಕ್ಷಣೆ, ಆರೋಗ್ಯ, ಧಾರ್ಮಿಕ ಸ್ವಾತಂತ್ರ್ಯದ ಜತೆಗೆ ದೌರ್ಜನ್ಯದ ವಿರುದ್ಧ ದನಿ ಎತ್ತುವ ಹಕ್ಕುಗಳು ಮಾನವ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತವೆ. ಮಾನವ ಹಕ್ಕುಗಳ ದಿನ ಹಿನ್ನೆಲೆ: ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ಡಿ.10 ಅನ್ನು ವಿಶ್ವ ಮಾನವ ಹಕ್ಕುಗಳ ದಿನವಾಗಿ ಆಚರಿಸಲಾಗುತ್ತಿದೆ. 1950ರ ಡಿಸೆಂಬರ್ 4ರಂದು ಪ್ಯಾರಿಸ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 317ನೇ ಅಧಿವೇಶನದಲ್ಲಿ ಮಾನವ ಹಕ್ಕುಗಳ ಬಗ್ಗೆ ಉಲ್ಲೇಕಿಸಲಾಗಿದೆ. ಭಾರತ ಸಂವಿಧಾನದ ಅನುಚ್ಛೇದ 32ರ ಅನುಸಾರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಅನುಚ್ಛೇದ 226ರ ಪ್ರಕಾರ ಜಾರಿಗೊಳಿಸುವ ಜವಾಬ್ದಾರಿಯನ್ನು ನ್ಯಾಯಾಂಗಕ್ಕೆ ವಹಿಸಲಾಗಿದೆ.
              2021ರ ಘೋಷವಾಕ್ಯವೇನು?: ಈ ವರ್ಷದ ಮಾನವ ಹಕ್ಕುಗಳ ದಿನದ ಘೋಷವಾಕ್ಯ 'ಸಮಾನತೆ'ಗೆ ಸಂಬಂಧಿಸಿದ್ದಾಗಿದೆ. ದೇಶದಲ್ಲಿ 'ಅಸಮಾನತೆ ಕಡಿಮೆ ಮಾಡುವುದು, ಮಾನವ ಹಕ್ಕುಗಳನ್ನು ಮುನ್ನಡೆಸುವುದು'. ಈ ಘೋಷವಾಕ್ಯವೂ ಅಸಮಾನತೆಗಳನ್ನು ಕಡಿಮೆ ಮಾಡಲು ಹಾಗೂ ದೇಶದ ಅಭಿವೃದ್ಧಿಗೆ ಮಾನವ ಹಕ್ಕುಗಳು ಉತ್ತಮ ಮಾರ್ಗ ಎನ್ನುವುದನ್ನು ಕೇಂದ್ರೀಕರಿಸುತ್ತದೆ. 
            ಮಾನವ ಹಕ್ಕುಗಳ ಉದ್ದೇಶ: ಯಾವುದೇ ಧರ್ಮ, ಲಿಂಗ, ಜನಾಂಗ, ಬಣ್ಣ, ಭಾಷೆ, ರಾಜಕೀಯ ಅಥವಾ ಇತರೆ ಅಭಿಪ್ರಾಯಗಳು, ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲಾ ಮಾನವರು ಸಮಾನರು. ಎಲ್ಲರೂ ಸಂಪೂರ್ಣ ಹಕ್ಕುಗಳನ್ನು ಹೊಂದಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ.                                    ಮಾನವ ಹಕ್ಕುಗಳ ಮಹತ್ವವೇನು?: ಕೋವಿಡ್​ ಬಿಕ್ಕಟ್ಟಿನಿಂದಾಗಿ ಬಡತನ, ಅಸಮಾನತೆಗಳು ಹೆಚ್ಚಾಗಿದ್ದು, ಇದರಿಂದ ಮಾನವ ಹಕ್ಕುಗಳಿಂದ ಅಂತರ ಉಂಟಾಗಿದೆ. ಹೀಗಾಗಿ, ಕೋವಿಡ್​ ಬಳಿಕದ ಜಗತ್ತಿನಲ್ಲಿ ಮಾನವ ಹಕ್ಕನ್ನು ಪ್ರಮುಖ ವಿಷಯವಾಗಿ ಪರಿಗಣಿಸಿ, ಅದರ ಮೂಲಕ ಅಸಮಾನತೆಗಳನ್ನು ಹೋಗಲಾಡಿಸಿದರೆ ಮಾತ್ರ ಸುಸ್ಥಿರ, ನ್ಯಾಯಸಮ್ಮತ ಜಗತ್ತನ್ನು ಪುನರ್​ನಿರ್ಮಿಸಬಹುದು. ಅದಕ್ಕಾಗಿ ನಾವು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳನ್ನು ಉತ್ತೇಜಿಸಬೇಕು ಮತ್ತು ರಕ್ಷಿಸಬೇಕು. ಹೊಸ ಜಗತ್ತಿಗೆ ಹೊಸತರದ ಬದಲಾವಣೆಗಳನ್ನು ಅಳವಡಿಸಿಕೊಳ್ಳಬೇಕು. ಮೂರನೇ ಡೋಸ್‌ನೊಂದಿಗೆ ರಕ್ಷಣೆಯನ್ನು ಗರಿಷ್ಠಗೊಳಿಸಲಾಗಿದೆ ಎಂಬುದು ಈ ಪ್ರಾಥಮಿಕ ಮಾಹಿತಿಯಿಂದ ಸ್ಪಷ್ಟವಾಗಿದೆ ಎಂದು ಫೈಜರ್ ಸಿಇಒ ಆಲ್ಬರ್ಟ್ ಬೌರ್ಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 
             ಬದುಕುವ ಹಕ್ಕು ಎಲ್ಲರಿಗೂ ಇದೆ: ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ವಸತಿ, ಆಹಾರ ಹಾಗೂ ಬಟ್ಟೆ. ಇವುಗಳಿಲ್ಲದೆ ಮನುಷ್ಯನ ಜೀವನವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಈ ಮೂಲ ಸವಲತ್ತುಗಳನ್ನು ಪಡೆಯುವುದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ. 



Tags

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries