ನವದೆಹಲಿ: ಅನಧಿಕೃತ ಫಲಾನುಭವಿಗಳನ್ನು ವ್ಯವಸ್ಥೆಯಿಂದ ದೂರ ಉಳಿಸುವಲ್ಲಿ ಆಧಾರ್ ಯಶಸ್ವಿಯಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ₹2.25 ಲಕ್ಷ ಕೋಟಿ ಉಳಿತಾಯವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ಮುಖ್ಯ ಕಾರ್ಯನಿರ್ಹಣಾಧಿಕಾರಿ ಸೌರಭ್ ಗರ್ಗ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ 300 ಕಾರ್ಯಯೋಜನೆಗಳು ಮತ್ತು ರಾಜ್ಯ ಸರ್ಕಾರಗಳ 400 ಕಾರ್ಯಯೋಜನೆಗಳನ್ನು ಆಧಾರ್ ಜೊತೆಗೆ ಜೋಡಿಸಲಾಗಿದೆ.

