ತಿರುವನಂತಪುರ: ಕೆ.ಎಸ್.ಆರ್.ಟಿ.ಸಿ.ಯಲ್ಲಿ ವೇತನ ಪರಿಷ್ಕರಣೆ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಕನಿಷ್ಠ ವೇತನವನ್ನು 23,000 ರೂ.ಗೆ ಏರಿಸಲಾಗುವುದು ಎಂದು ಸಾರಿಗೆ ಸಚಿವ ಆಂಟನಿ ರಾಜು ಹೇಳಿದ್ದಾರೆ. ಪರಿಷ್ಕøತ ವೇತನವು ಜನವರಿ 2022 ರಿಂದ ಪ್ರಾರಂಭವಾಗಲಿದೆ ಎಂದು ಸಚಿವರು ಹೇಳಿದರು.
ಕೆ.ಎಸ್.ಆರ್.ಟಿ.ಸಿ. ನೌಕರರ ವೇತನವನ್ನು ಸರ್ಕಾರಿ ನೌಕರರ ವೇತನ ಶ್ರೇಣಿಗೆ ಸಮೀಕರಿಸಲಾಗಿದೆ. ವೇತನವು ಜೂನ್ 2021 ರಿಂದ ಪೂರ್ವಭಾವಿ ಪರಿಣಾಮವನ್ನು ಹೊಂದಿರುತ್ತದೆ. ಸರಕಾರದ ಆರ್ಥಿಕ ಪರಿಸ್ಥಿತಿ ಸುಧಾರಿಸಿದಾಗ ಬಾಕಿ ಹಣ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಕೆ.ಎಸ್.ಆರ್.ಟಿ.ಸಿ.ಯಲ್ಲಿ ಡ್ರೈವರ್ ಕಮ್ ಕಂಡಕ್ಟರ್ ಹುದ್ದೆಯನ್ನು ಸೃಷ್ಟಿಸಲಾಗುವುದು. 45 ವರ್ಷ ಮೇಲ್ಪಟ್ಟ ನೌಕರರಿಗೆ 5 ವರ್ಷಗಳವರೆಗೆ ಅರ್ಧ ವೇತನ ರಜೆ ನೀಡುವ ಯೋಜನೆಯೂ ಇದೆ ಎಂದರು. ವಿಸ್ತೃತ ಚರ್ಚೆ ಬಳಿಕ ಪಿಂಚಣಿ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಇದಾದ ಬಳಿಕ ಕೆ ಸ್ವಿಫ್ಟ್ ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.




