ಕಾಸರಗೋಡು: ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳೊಂದಿಗೆ ಷಷ್ಠಿ ಮಹೋತ್ಸವ ಆಚರಿಸಲಾಯಿತು.
ಕೂಡ್ಲಿನ ಸಮೀಪ ಬಾದಾರದ ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವವು ವೈಭವದಿಂದ ಜರಗಿತು. ಗಣಪತಿ ಹವನ, ಸಾಮೂಹಿಕ ನಾಗತಂಬಿಲ, ವಾಸ್ತು ಹೋಮಾದಿಗಳು, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ ಉತ್ಸವಬಲಿ ಜರಗಿತು.
ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ವರ್ಕಾಡಿ ಶ್ರೀ ಕಾವೀ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಹಿತ ವಿವಿ`À ದೇವಸ್ಥಾನಗಳಲ್ಲಿ ಹಾಗು ವಿವಿಧ ಭಜನಾ ಮಂದಿರಗಳಲ್ಲಿ ಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಹಾಗು ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
(ಚಿತ್ರ ಮಾಹಿತಿ : ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ)




