ಉಪ್ಪಳ: ಮಂಜೇಶ್ವರ ತಾಲೂಕು ಮಿನಿ ಸಿವಿಲ್ ಸ್ಟೇಷನ್ ಜಾಗವನ್ನು ಕೂಡಲೇ ಗುರುತಿಸಿ ಕಾಮಗಾರಿ ಆರಂಭಿಸುವಂತೆ ತಾಲೂಕು ಅಭಿವೃದ್ಧಿ ಸಮಿತಿ ಸಭೆ ಆಗ್ರಹಿಸಿದೆ. ಮಂಜೇಶ್ವರ ತಾಲೂಕಿಗೆ ಮಂಜೂರಾದ ಸಪ್ಲೈ ಕಛೇರಿಯ ನೂತನ ಕಟ್ಟಡ ಲಭ್ಯವಾಗುವಂತೆ ಹಾಗೂ ಉಪ್ಪಳ ಮತ್ತು ಪೈವಳಿಕೆ ಪೋಲೀಸ್ ಠಾಣೆಗಳನ್ನು ಶೀರ್ಘರ ಕಾರ್ಯಗತಗೊಳಿಸಲು ಕ್ರಮಕೈಗೊಳ್ಳಬೇಕೆಂದು ಸಭೆ ಒತ್ತಾಯಿಸಿತು. ಕೋವಿಡ್ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಸ್ಥಗಿತಗೊಂಡಿದೆ. ಗುಡ್ಡಗಾಡು ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಲಾಯಿತು. ಬಸ್‍ಗಳಿಗೆ ಅನುಮತಿ ನೀಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಸ್ಥಳೀಯ ಅಧಿಕಾರಿಗಳ ಕೊರತೆಯೇ ದೊಡ್ಡ ಸಮಸ್ಯೆಯಾಗಿದೆ ಎಂದು ತಾಲೂಕು ಅಭಿವೃದ್ಧಿ ಸಮಿತಿ ಅಭಿಪ್ರಾಯಪಟ್ಟಿದೆ. ತಾಲೂಕು ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಗೂ ಇತರೆ ಪ್ರದೇಶಗಳಲ್ಲಿ ಅಪಾಯಕಾರಿಯಾಗಿ ಬೆಳೆದಿರುವ ಮರಗಳನ್ನು ಕಡಿಯಲು ವೃಕ್ಷ ಸಮಿತಿ ಸಭೆ ಕರೆಯಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಸಭೆಯಲ್ಲಿ ಶಾಸಕ ಎ.ಕೆ.ಎಂ. ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀನಾ ಟೀಚರ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಮಂಜೇಶ್ವರ ತಹಸೀಲ್ದಾರ್ ಪಿಕೆ ಆಂಟೋ ಹಾಗೂ ವಿವಿಧ ಇಲಾಖೆಗಳನ್ನು ಪ್ರತಿನಿಧಿಸುವ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.




