ನವದೆಹಲಿ: ಕೋವಿಡ್ ಸಂದರ್ಭದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಬಂದ್ ಮಾಡಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
0
samarasasudhi
ಡಿಸೆಂಬರ್ 18, 2021
ನವದೆಹಲಿ: ಕೋವಿಡ್ ಸಂದರ್ಭದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಬಂದ್ ಮಾಡಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
'ಕೋವಿಡ್-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಶೇ 9ರಷ್ಟು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಸ್ಥಗಿತಗೊಂಡಿವೆ ಎಂದು ಸರ್ಕಾರವು ಸಂಸತ್ತಿನಲ್ಲಿ ಒಪ್ಪಿಕೊಂಡಿದೆ. ಈ ಬಗ್ಗೆ ಲೋಸಕಭೆಯಲ್ಲಿ ನಾನು ಕೆಲವು ಗಂಭೀರ ಪ್ರಶ್ನೆಗಳನ್ನು ಕೇಳಿದ್ದೆ. ಅದಕ್ಕೆ ಪ್ರತಿಯಾಗಿ 'ಶೇ 9ರಷ್ಟು ಎಂಎಸ್‌ಎಂಇಗಳು ಮುಚ್ಚಿಹೋಗಿವೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಇದರ ಅರ್ಥ 'ಮಿತ್ರರಿಗೆ ಲಾಭ', ದುರ್ಬಲವಾಗಿರುವವರ ಆರ್ಥಿಕ ಸ್ಥಿತಿ ಮತ್ತು ಉದ್ಯೋಗದ ಅಂತ್ಯ' ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಸಂಬಂಧ ಲೋಕಸಭೆಯಲ್ಲಿ ಗುರುವಾರ ಅವರು ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿರುವ ಉತ್ತರವನ್ನೂ ಅವರು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.