ಕಾಸರಗೋಡು: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ರವಿಶಂಕರ ಜಿ.ಕೆ. ಅವರು ಮಂಡಿಸಿದ 'ಕನ್ನಡ ಸಾಹಿತ್ಯದಲ್ಲಿ ಪ್ರಾಣಿರೂಪಕಗಳು: ಅನ್ಯತೆಯ ಅನುಸಂಧಾನ' ಎಂಬ ಮಹಾಪ್ರಬಂಧಕ್ಕೆ ಕಣ್ಣೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.
ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಕೆದುಂಬಾಡಿ ಗೋಪಾಲಕೃಷ್ಣ ಭಟ್ ಮತ್ತು ಪರಮೇಶ್ವರಿಯವರ ಪುತ್ರನಾಗಿರುವ ರವಿಶಂಕರ ಜಿ.ಕೆ. ಪ್ರಾಥಮಿಕ ಶಿಕ್ಷಣವನ್ನು ಪಾಣಾಜೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢಶಿಕ್ಷಣವನ್ನು ಪಾಣಾಜೆಯ ಸುಬೋಧ ಪ್ರೌಢಶಾಲೆಯಲ್ಲಿ, ಪಿಯುಸಿ ಶಿಕ್ಷಣವನ್ನು ಬೆಟ್ಟಂಪಾಡಿಯ ಸರಕಾರಿ ಕಾಲೇಜಿನಲ್ಲಿ, ಪದವಿ ಶಿಕ್ಷಣವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಿಂದ ಪಡೆದುಕೊಂಡು ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ಕಾಸರಗೋಡು ಸರಕಾರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ರಾಧಾಕೃಷ್ಣ ಎನ್. ಬೆಳ್ಳೂರು ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಮಹಾಪ್ರಬಂಧಕ್ಕೆ ಈಗ ಡಾಕ್ಟರೇಟ್ ಪದವಿ ಲಭಿಸಿದೆ.
ರವಿಶಂಕರ ಜಿ.ಕೆ. ಅವರು ಕನ್ನಡ ಎಂ.ಎ. ಓದುತ್ತಿರುವಾಗಲೇ ಕೆ-ಸೆಟ್, ಯುಜಿಸಿ-ನೆಟ್ ಅರ್ಹತೆಯ ಜೊತೆಗೆ ಜೆ.ಆರ್.ಎಫ್. ಶಿಷ್ಯವೇತನಕ್ಕೆ ಆಯ್ಕೆಯಾಗಿರುತ್ತಾರೆ. ಇವರು ತಮ್ಮ ಶೈಕ್ಷಣಿಕ ಸಾಧನೆಗಳಿಗೆ ಆಂ
ಧ್ರಸರಕಾರದಿಂದ ಚಿನ್ನದ ಪದಕ ಸಹಿತ 'ಪ್ರತಿಭಾ ಅವಾರ್ಡ್-2014' ಪ್ರಶಸ್ತಿಗೆ ಪಾತ್ರರಾಗಿದ್ದರು.