HEALTH TIPS

ಕೋವಿಡ್ ಲಸಿಕೆಯ ಬೂಸ್ಟರ್‌ ಡೋಸ್‌: ಮೂಡದ ಸಹಮತ

       ನವದೆಹಲಿ: ಮಕ್ಕಳಿಗೆ ಲಸಿಕೆ ಮತ್ತು ಕೋವಿಡ್‌ ರೋಗಿಗಳಿಗೆ ಬೂಸ್ಟರ್ ಡೋಸ್‌ ನೀಡುವ ಕುರಿತು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ಸೋಮವಾರದ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

        ಬೂಸ್ಟರ್ ಡೋಸ್‌ ಕುರಿತು ಸಮರ್ಥನೆಯಾಗಿ ಯಾವುದೇ ವೈಜ್ಞಾನಿಕ ಅಧ್ಯಯನ ಇಲ್ಲದಿರುವುದು ಈ ನಿರ್ಧಾರಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ.

          ಈ ಮಧ್ಯೆ, ಭಾರತೀಯ ವೈದ್ಯಕೀಯ ಸಂಘವು ಆರೋಗ್ಯ ಕಾರ್ಯಕರ್ತರಿಗೆ ಹೆಚ್ಡುವರಿಯಾಗಿ ಒಂದು ಡೋಸ್‌ ಲಸಿಕೆ ನೀಡಬೇಕು ಎಂದು ಸರ್ಕಾರರವನ್ನು ಆಗ್ರಹಪಡಿಸಿದೆ.

          ಲಸಿಕೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ ಮೂಲಗಳ ಪ್ರಕಾರ, ಬೂಸ್ಟರ್ ಡೋಸ್‌ ಸಮರ್ಥನೆಯಾಗಿ ವೈಜ್ಞಾನಿಕ ಅಧ್ಯಯನ ಇಲ್ಲದಿರುವುದು ಹಾಗೂ ಈ ಸಂಬಂಧ ಸಹಮತ ಮೂಡದ ಕಾರಣ ಶಿಫಾರಸು ಮಾಡಿಲ್ಲ.

        ವೈಜ್ಞಾನಿಕ ಶಿಫಾರಸು ಆಧರಿಸಿ ಮಕ್ಕಳಿಗೆ ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದು ಕೊಳ್ಳಲಿದೆ ಎಂದು ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಕಳೆದ ವಾರ ಲೋಕಸಭೆಯಲ್ಲಿ ತಿಳಿಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries