HEALTH TIPS

ದೇಶದಲ್ಲಿ ಕೊರೋನಾ ಹೆಚ್ಚಳ: ಆಸ್ಪತ್ರೆಗಳ ಸನ್ನದ್ಧತೆ ಬಲಪಡಿಸುವಂತೆ ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಸೂಚನೆ

         ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ.

          ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆದಿದ್ದು, ಕೋವಿಡ್ -19 ಪರೀಕ್ಷೆಯನ್ನು ಹೆಚ್ಚಿಸಲು, ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸಲು, ವ್ಯಾಕ್ಸಿನೇಷನ್ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

             ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

          ಭಾರತದಲ್ಲಿ ಗುರುವಾರ 13,154 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 180 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿಕೆಯಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries