ಬದಿಯಡ್ಕ: ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಯನ್ನು ಜನರೆಡೆಗೆ ತಲುಪಿಸಲು ಕಾರ್ಯಕರ್ತರು ಸಜ್ಜಾಗಬೇಕು. ಈ ನಿಟ್ಟಿನಲ್ಲಿ ನೀರ್ಚಾಲಿನ ಕಾರ್ಯಕರ್ತರ ಶ್ರಮ ಶ್ಲಾಘನೀಯ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರವೀಶ ತಂತ್ರಿ ಕುಂಟಾರು ಹೇಳಿದರು.
ಗ್ರಾಮ ವಿಕಾಸ ಸಮಿತಿ, ಸೇವಾ ಭಾರತಿ ಏಣಿಯರ್ಪು ಇದರ ವತಿಯಿಂದ ನೀರ್ಚಾಲು ಏಣಿಯರ್ಪು ಹನುಮಾನ್ ನಗರದ ವೀರಾಂಜನೇಯ ವ್ಯಾಯಾಮ ಶಾಲೆಯಲ್ಲಿ ಜರಗಿದ ಅಸಂಘಟಿತ ವಲಯದ ಕಾರ್ಮಿಕರಿಗೆ ಒದಗಿಸಲಾಗುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇ-ಶ್ರಮ್ ನೊಂದಾವಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಗ್ರಾಪಂ ಸದಸ್ಯೆ ಮಹೇಶ್ ವಳಕ್ಕುಂಜ ಉಪಸ್ಥಿತರಿದ್ದರು. ನೂರಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬ್ಲಾಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ನೀರ್ಚಾಲು ಸ್ವಾಗತಿಸಿ, ವಾರ್ಡು ಸದಸ್ಯೆ ಸ್ವಪ್ನಾ ವಂದಿಸಿದರು.




