ಕಾಸರಗೋಡು: ಐಸಿಡಿಎಸ್ 46 ನೇ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಕಾಸರಗೋಡು ಕಲೆಕ್ಟರೇಟ್‍ನಲ್ಲಿ ರೋಲ್ ಅಪ್ ಸ್ಟ್ಯಾಂಡ್ ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಉದ್ಘಾಟಿಸಿದರು. ಐಸಿಡಿಎಸ್ ಜಿಲ್ಲಾ ಕಾರ್ಯಕ್ರಮಾಧಿಕಾರಿ ಬೀನಮ್ಮ ಜೇಕಬ್ ಅಧ್ಯಕ್ಷತೆ ವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಾರಿಗೊಳಿಸಲಾದ ಯೋಜನೆಗಳು ಮತ್ತು ಇಲಾಖೆಯಿಂದ ನೀಡಲಾಗುವ ಅನುದಾನವನ್ನು ಉತ್ತೇಜಿಸುವ ಅಭಿಯಾನದ ಭಾಗವಾಗಿ ಈ ಸ್ಟ್ಯಾಂಡ್ ನ್ನು ಸ್ಥಾಪಿಸಲಾಯಿತು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿ.ಎಸ್. ಶಿಮ್ನಾ, ಜಿಲ್ಲಾ ಪಂಚಾಯಿತಿ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿನೋಜ್ ಚಾಕೊ, ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಕೆ.ವಿ.ಪುಷ್ಪಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಎ. ಬಿಂದು ಮಾತನಾಡಿದರು. ರಾಷ್ಟ್ರೀಯ ಪೋಷಣ್ ಮಿಷನ್ ಮತ್ತು ಮಹಿಳಾ ಶಕ್ತಿ ಕೇಂದ್ರದ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




