HEALTH TIPS

ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ

    ಕೊಟ್ಟಾಯಂ: ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

     ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

     ಬೃಹತ್​​ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ನೋಡಿದ ಸಿಬ್ಬಂದಿ ಅಲ್ಲಿಂದ ತಕ್ಷಣವೇ ಬೇರೆ ಕಡೆ ಹೋಗಿದ್ದಾರೆ. ಸಿಬ್ಬಂದಿಯ ಬ್ಯಾಗ್ ಸೇರಿದಂತೆ ಎಲ್ಲವೂ ಬೆಂಕಿಗೆ ಆಹುತಿಯಾಗಿದೆ.

     ಇಂದು ಮಧ್ಯಾಹ್ನ 2.30ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಈ ಸ್ಥಳದಲ್ಲಿ ತ್ಯಾಜ್ಯವನ್ನು ಮತ್ತು ಪ್ಲಾಸ್ಟಿಕ್ ಕವರ್​ಗಳನ್ನು ಸಂಗ್ರಹಿಸಿಡಲಾಗಿತ್ತು.

     ಎರಡು ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries