HEALTH TIPS

ಕಾಂಗ್ರೆಸ್‌ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ: ಭೂಪೇಶ್ ಬಘೇಲ್

                 ನವದೆಹಲಿಬಿಜೆಪಿಯನ್ನು ಎದುರಿಸಲು ಪ್ರಮುಖ ಆಧಾರ ಸ್ಥಂಭವಾಗಿರುವ ಕಾಂಗ್ರೆಸ್‌ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ ಎಂದು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

              'ಯುಪಿಎ ಮೈತ್ರಿಕೂಟ ಇಲ್ಲ' ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಘೇಲ್‌ ಅವರು, ಆಡಳಿತಾರೂಢ ಪಕ್ಷದ ವಿರುದ್ಧ ಹೋರಾಡುವಲ್ಲಿ ಟಿಎಂಸಿಯನ್ನು ಪ್ರಮುಖ ವಿರೋಧ ಪಕ್ಷವಾಗಿಸಲು ಬಯಸುತ್ತೀರಾ?

               ಅಥವಾ ಇತರ ವಿರೋಧ ಪಕ್ಷಗಳನ್ನೂ ಜೊತೆಗೆ ಸೇರಿಸಿಕೊಳ್ಳುತ್ತೀರಾ? ಎಂಬುದನ್ನು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಬೇಕು ಎಂದಿದ್ದಾರೆ.

              2024ರ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧಪಕ್ಷದ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದನ್ನು ಸೋನಿಯಾ ಗಾಂಧಿ ನೇತೃತ್ವದ ಯುಪಿಎ ಮೈತ್ರಿಕೂಟ ತಿರ್ಮಾನಿಸಲಿದೆ ಎಂದೂ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries