ಕಾಸರಗೋಡು: ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಡಿ.18 ರಂದು ಜಿಲ್ಲಾ ಮಟ್ಟದಲ್ಲಿ ಚಿತ್ರಕಲೆ ಮತ್ತು ಛಾಯಾಗ್ರಹಣ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ.
ಪ್ಲಸ್ ಟು ಹಂತದವರೆಗಿನ ಮಕ್ಕಳಿಗೆ ‘ಎವೇಕ್ ಕನ್ಸ್ಯೂಮರ್ ಅವೇಕ್’ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ‘ಹಸಿರು ಬಳಕೆ ಪ್ಲಾಸ್ಟಿಕ್ ಮಾಲಿನ್ಯ’ ಕುರಿತು ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಡಿಸೆಂಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಕಲೆಕ್ಟರೇಟ್ ಮಿನಿ ಕಾನ್ಫರೆನ್ಸ್ ಹಾಲ್‍ಗೆ ಹಾಜರಾಗಬೇಕು. ದೂರವಾಣಿ: 04994 255138, 9497288306.

