HEALTH TIPS

ಸಿಬಿಐ ನಿರ್ದೇಶಕರ ಅವಧಿ ವಿಸ್ತರಣೆಗೆ ಸಂಸತ್ ಒಪ್ಪಿಗೆ

      ನವದೆಹಲಿ: ಕೇಂದ್ರ ತನಿಖಾ ದಳದ (ಸಿಬಿಐ) ನಿರ್ದೇಶಕರ ಅವಧಿಯನ್ನು ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿದೆ.

       12 ಸದಸ್ಯರ ಅಮಾನತು ಖಂಡಿಸಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಯ ನಡುವೆಯೇ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ರಾಜ್ಯಸಭೆಯಲ್ಲಿ 'ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ 2021' ಅನ್ನು ಮಂಡಿಸಿದರು.

        ನಂತರ ಮಸೂದೆಯನ್ನು ಮೇಲ್ಮನೆಯಲ್ಲಿ (ರಾಜ್ಯಸಭೆ) ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಡಿ.3ರಂದು ಈ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು.

       ಸಿಬಿಐ ನಿರ್ದೇಶಕರ ಅಧಿಕಾರ ಅವಧಿಯನ್ನು ವಿಸ್ತರಿಸಲು ದೆಹಲಿ ವಿಶೇಷ ಪೊಲೀಸ್ ವ್ಯವಸ್ಥೆ (ತಿದ್ದುಪಡಿ) ಸುಗ್ರೀವಾಜ್ಞೆ-2021 ಮತ್ತು ಇ.ಡಿ ನಿರ್ದೇಶಕರ ಅಧಿಕಾರ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲು ಕೇಂದ್ರೀಯ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ-2021ಗಳನ್ನು ಕೇಂದ್ರ ಸರ್ಕಾರವು ಈ ಹಿಂದೆ ಹೊರಡಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries