HEALTH TIPS

ಹೆಲಿಕಾಪ್ಟರ್‌ ದುರಂತದ ಬಗೆಗಿನ ಊಹಾಪೋಹಗಳನ್ನು ನಿಲ್ಲಿಸಬೇಕು: ವಾಯುಪಡೆ

      ಬೆಂಗಳೂರು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ದುರಂತದ ಕುರಿತ ಊಹಾಪೋಹಗಳನ್ನು ನಿಲ್ಲಿಸಬೇಕು ಎಂದು ಭಾರತೀಯ ವಾಯುಪಡೆಯುವ ಶುಕ್ರವಾರ ಮನವಿ ಮಾಡಿದೆ.

      'ಡಿಸೆಂಬರ್ 8ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ.

ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಸತ್ಯವನ್ನೂ ಹೊರತರಲಾಗುತ್ತದೆ. ಅಲ್ಲಿಯವರೆಗೆ, ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು,' ಎಂದು ವಾಯುಪಡೆಯ ಅಧಿಕೃತ ಟ್ವಿಟರ್‌ ಖಾತೆಯ ಮೂಲಕ ಶುಕ್ರವಾರ ಟ್ವೀಟ್‌ ಮಾಡಲಾಗಿದೆ.


     ತಮಿಳುನಾಡಿನ ಕೂನೂರು ಸಮೀಪ ಬುಧವಾರ ಸೇನಾ ಹೆಲಿಕಾಪ್ಟರ್‌ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ. ಏರ್‌ ಮಾರ್ಷಲ್‌ ಮಾನವೇಂದ್ರ ಸಿಂಗ್‌ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.

         ಅಂದು ನಡೆದ ದುರಂತದಲ್ಲಿ ಸೇನಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌, ಅವರ ಪತ್ನಿ ಮಧುಲಿಕಾ ಮತ್ತು ಇತರ 11 ಮಂದಿ ಮೃತಪಟ್ಟಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries