ಅಹ್ಮದಾಬಾದ್: ಗುಜರಾತ್ ಕರಾವಳಿಯಲ್ಲಿನ ಭಾರತದ ಸಮುದ್ರದಲ್ಲಿ ಸಂಚರಿಸುತ್ತಿದ್ದ ಪಾಕಿಸ್ತಾನ ದೋಣಿಯೊಂದನ್ನು ಭಾರತೀಯ ಕರಾವಳಿ ಕಾವಲುಪಡೆ (ಐಸಿಜಿ) ವಶಪಡಿಸಿಕೊಂಡಿದ್ದು, ಅದರಲ್ಲಿದ್ದ 10 ಮಂದಿಯನ್ನು ಬಂಧಿಸಲಾಗಿದೆ ಎಂದು ರಕ್ಷಣಾ ವಕ್ತಾರರೊಬ್ಬರು ಭಾನುವಾರ ಹೇಳಿದ್ದಾರೆ.
0
samarasasudhi
ಜನವರಿ 10, 2022
ಅಹ್ಮದಾಬಾದ್: ಗುಜರಾತ್ ಕರಾವಳಿಯಲ್ಲಿನ ಭಾರತದ ಸಮುದ್ರದಲ್ಲಿ ಸಂಚರಿಸುತ್ತಿದ್ದ ಪಾಕಿಸ್ತಾನ ದೋಣಿಯೊಂದನ್ನು ಭಾರತೀಯ ಕರಾವಳಿ ಕಾವಲುಪಡೆ (ಐಸಿಜಿ) ವಶಪಡಿಸಿಕೊಂಡಿದ್ದು, ಅದರಲ್ಲಿದ್ದ 10 ಮಂದಿಯನ್ನು ಬಂಧಿಸಲಾಗಿದೆ ಎಂದು ರಕ್ಷಣಾ ವಕ್ತಾರರೊಬ್ಬರು ಭಾನುವಾರ ಹೇಳಿದ್ದಾರೆ.
ಜನವರಿ 8 ರಂದು ರಾತ್ರಿ ಭಾರತೀಯ ಕರಾವಳಿ ಕಾವಲು ಪಡೆಯ ಹಡಗು 'ಅಂಕಿತ್' ಅರಬ್ಬಿ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಪಾಕಿಸ್ತಾನ ದೋಣಿ 'ಯಾಸೀನ್' ಅನ್ನು ವಶಪಡಿಸಿಕೊಂಡು ಅಲ್ಲಿದ್ದ 10 ಸಿಬ್ಬಂದಿಯನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗೆ ದೋಣಿಯನ್ನು ಪೋರ್‌ಬಂದರ್‌ಗೆ ತರಲಾಗಿದೆ' ಎಂದು ಅಧಿಕಾರಿ ಟ್ವೀಟ್ ಮಾಡಿದ್ದಾರೆ.
ಕಳೆದ ಸೆಪ್ಟೆಂಬರ್ 15ರಂದು ಸಹ ಇಂತಹದೇ ಕಾರ್ಯಾಚರಣೆ ನಡೆಸಿ 12 ಮಂದಿ ಪಾಕಿಸ್ತಾನಿ ಪ್ರಜೆಗಳಿದ್ದ ದೋಣಿಯನ್ನು ವಶಕ್ಕೆ ಪಡೆಯಲಾಗಿತ್ತು. ಡಿಸೆಂಬರ್ 20ರಂದು ₹ 400 ಕೋಟಿ ಮೌಲ್ಯದ 77 ಕೆ.ಜಿ ಹೆರಾಯಿನ್ ತುಂಬಿದ್ದ ಪಾಕಿಸ್ತಾನದ ದೋಣಿಯನ್ನು ವಶಕ್ಕೆ ಪಡೆದು, ಆರು ಮಂದಿಯನ್ನು ಬಂಧಿಸಲಾಗಿತ್ತು.