ನವದೆಹಲಿ: ಜನವರಿ 12ರಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
0
samarasasudhi
ಜನವರಿ 10, 2022
ನವದೆಹಲಿ: ಜನವರಿ 12ರಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ಸ್ವಾಮಿ ವಿವೇಕಾನಂದರ ಜನ್ಮದಿನವಾದ ಈ ದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.
'ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜೊತೆಗೆ ಉತ್ತಮ ಮೌಲ್ಯಗಳನ್ನು ಹಂಚಿಕೊಳ್ಳುವಂತೆ ನನ್ನ ಯುವ ಸ್ನೇಹಿತರಿಗೆ ಸಲಹೆ ನೀಡುತ್ತೇನೆ. ಭಾರತದ ಪ್ರತಿಭಾವಂತ ಯುವ ಜನತೆಯನ್ನು ಕಂಡಾಗ ಹರ್ಷವಾಗುತ್ತದೆ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರ ನಿರ್ಮಾಣದಲ್ಲಿ ಏಕತೆಯ ಒಂದು ಶಕ್ತಿಯಾಗಿ ಯುವ ಜನತೆಯ ಮನಸ್ಸು ರೂಪಿಸುವುದು ಉತ್ಸವದ ಗುರಿಯಾಗಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಜನವರಿ 12-13ರಂದು ವರ್ಚುವಲ್ ರೂಪದಲ್ಲಿ ಉತ್ಸವವನ್ನು ಆಯೋಜಿಸಲಾಗಿದೆ.