ಬದಿಯಡ್ಕ: ನೀರ್ಚಾಲು ಸಮೀಪದ ಕಕ್ಕಂಕೂಡ್ಲು ಶ್ರೀಕಂಠಪ್ಪಾಡಿ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳೊಂದಿಗೆ ಜ.22 ರಿಂದ 30ರ ವರೆಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಜ.22 ರಂದು ಬೆಳಿಗ್ಗೆ 8ಕ್ಕೆ ಗಣಪತಿ ಹವನ, 9.30 ರಿಂದ ಉಗ್ರಾಣ ಮುಹೂರ್ತ, 10.30 ರಿಂದ ಭಜನೆ, 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 5.30 ರಿಂದ ತಂತ್ರಿವರ್ಯರ ಆಗಮನ, ಪೂರ್ಣಕುಂಭ ಸ್ವಾಗತ, ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹ ವಾಚನ, ಪ್ರಾಸಾದ ಶುದ್ದಿ, ಅಂಕುರಾರೋಹಣ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ ಹಾಗೂ ವಾಸ್ತು ಪುಣ್ಯಾಹಂತ ನಡೆಯಲಿದೆ. 6 ಕಕೆ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಆಗಮನ, ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀಗಳು ಆಶೀರ್ವಚನ ನೀಡುವರು. ಶ್ರೀಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ನ್ಯಾಯವಾದಿ ಗೌರೀಶಂಕರ ರೈ, ಅಧ್ಯಕ್ಷತೆ ವಹಿಸುವರು. ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್, ಉಡುಪಿ ಪೂರ್ಣಪ್ರಜ್ಞ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಕೃಷ್ಣ ಕೊಳತ್ತಾಯ, ಹಿರಿಯ ಜ್ಯೋತಿಷ್ಯ ವಿದ್ವಾಂಸ ಕುಂಜಾರು ವೆಂಕಟೇಶ್ವರ ಭಟ್ ಪಾಲಕ್ಕಾಡ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಅವರು ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.
ಜ.23 ರಂದು ಬೆಳಿಗ್ಗೆ 6 ರಿಂದ ಗಣಪತಿಹೋಮ, ಪ್ರಾಯಶ್ಚಿತ ಹೋಮ, ಚತುಘಶುದ್ದಿ, ಧಾರಾ ಆವಗಾಹ ಪಂಚಕ, ಅಂಕುರಪೂಜೆ ನಡೆಯಲಿದೆ. 10.30 ರಿಂದ ಭಜನೆ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 6ಕ್ಕೆ ಭಜನೆ, 6ರಿಂದ ಹೋಮ, ಕಲಶಾಭಿಷೇಕ, ಅಂಕುರಪೂಜೆ, ರಾತ್ರಿ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.
ಜ.24 ರಂದು ಬೆಳಿಗ್ಗೆ 6 ರಿಂದ ಗಣಪತಿ ಹೋಮ, ಶಾಂತಿಹೋಮ, ಸ್ವಶಾಂತಿ ಹೋಮ, ಅದ್ಬುತ ಶಾಂತಿ, ಚೋರಶಾಂತಿ, ದಹನ ಪ್ರಾಯಶ್ಚಿತ, ಅಂಕುರಪೂಜೆ, ತ್ರಿಕಾಲ ಪೂಜೆ ನಡೆಯಲಿದೆ. 10.30 ರಿಂದ ಕುಮಾರ ಮಂಗಲ ಸಾರಂಗ ಸಂಗೀತ ಶಾಲಾ ತಮಡದಿಂದ ಸಂಗೀತಾರ್ಚನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 5.30 ರಿಂದ ಭಜನೆ, 6 ರಿಂದ ಹೋಮಕಲಶಾಭಿಷೇಕ, ಅಂಕುರಪೂಜೆ, ತ್ರಿಕಾಲ ಪೂಜೆ, ಅನುಜ್ಞಾ ಕಲಶ ಪೂಜೆ, ಅಧಿವಾಸ ಹೋಮ, ಕಲಶಾಧಿವಾಸ, ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.
ಜ.25 ರಂದು ಬೆಳಿಗ್ಗೆ 6 ರಿಂದ ಗಣಪತಿಹೋಮ, ತತ್ವಕಲಶ, ತತ್ವಹೋಮ, ಅನುಜ್ಞಾ ಕಲಶಾಭಿಷೇಕ, ಅಂಕುರಪೂಜೆ, ತ್ರಿಕಾಲ ಪೂಜೆ ನಡೆಯಲಿದೆ. 10.30 ರಿಂದ ಭಜನೆ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 6 ರಿಂದ ಯಕ್ಷಗಾನ ತಾಳಮದ್ದಳೆ, 6 ರಿಂದ ಅನುಜ್ಞಾ ಬಲಿ, ಕ್ಷೇತ್ರಪಾಲನಲ್ಲಿ ಅನುಜ್ಞಾ ಪ್ರಾರ್ಥನೆ, ಅಂಕುರಪೂಜೆ, ತ್ರಿಕಾಲ ಪೂಜೆ, ಬಿಂಬ ಶುದ್ದಿ, ಕಲಶಪೂಜೆ, ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.
ಜ.26 ರಂದು ಬೆಳಿಗ್ಗೆ 6 ರಿಂದ ಗಣಪತಿಹೋಮ, ತ್ರಿಕಾಲ ಪೂಜೆ, ಸಂಹಾರ ತತ್ವಹೋಮ, ತ್ರಿಕಾಲಪೂಜೆ, ಸಂಹಾರ ತತ್ವಹೋಮ, ತತ್ವಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಶಯ್ಯಾಪೂಜೆ, ತತ್ವಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋಧ್ವಾಸನೆ, ಜೀವಕಲಶ, ಶಯ್ಯೋನ್ನಯನ, ಅಂಕುರಪೂಜೆ ನಡೆಯಲಿದೆ. 10.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ, 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 5.30 ರಿಂದ ಭಜನೆ, 6 ರಿಂದ ಬಿಂಬಶುದ್ದಿ, ಕಲಶಾಭಿಷೇಕ, ಪೀಠಾಧಿವಾಸ, ಧ್ಯಾನಾಧಿವಾಸ, ಅಧಿವಾಸ ಹೋಮ, ಅಧಿವಾಸ ಬಲಿ, ತ್ರಿಕಾಲಪೂಜೆ, ಶಿರಸ್ತತ್ವ ಹೋಮ, ಪುಣ್ಯಾಹ ವಾಚನ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹ ನಡೆಯಲಿದೆ. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ನಡೆಯಲಿದೆ.
ಜ.27 ರಂದು ಬೆಳಿಗ್ಗೆ 6 ರಿಂದ 108 ಕಾಯಿಗಳ ಗಣಪತಿ ಹೋಮ, ಪ್ರತಿಷ್ಠಾ ಪಾನಿ, ಪ್ರತಿಷ್ಠಾ ಬಲಿ, ಅಂಕುಪೂಜೆ ನಡೆದು, 10.8ರ ಮುಹೂರ್ತದಲ್ಲಿ ಶ್ರೀಸುಬ್ರಹ್ಮಣ್ಯ ಸ್ವಾಮಿ, ಪರಿವಾರ ದೇವರ ಪ್ರತಿಷ್ಠೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 1.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 6 ಕ್ಕೆ ಭಜನೆ, ನಿತ್ಯನೈಮಿತ್ತಿಕ ನಿರ್ಣಯ, ಭದ್ರದೀಪವಿಟ್ಟು ಕವಾಟ ಬಂಧನ, ಅಂಕುಪೂಜೆ, ಸೋಪಾನ ಪೂಜೆ ನಡೆಯಲಿದೆ. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಜ.28 ರಂದು ಬೆಳಿಗ್ಗೆ 6 ರಿಂದ ಗಣಪತಿಹೋಮ, ಇಂದ್ರಾದಿ ದಿಕ್ಪಾಲಕ ಪ್ರತಿಷ್ಠೆ, ಸಪ್ರಮಾತೃಕಾ ಪ್ರತಿಷ್ಠೆ, ನಿರ್ಮಾಲ್ಯಧಾರಿ ಪ್ರತಿಷ್ಠೆ, ಅಂಕುರಪೂಜೆನಡೆಯಲಿದೆ. 10.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಮಧ್ಯಾಹ್ನ 12.30ಕ್ಕೆ ಸೋಪಾನ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಭೋಜನ ನಡೆಯಲಿದೆ. ಸಂಜೆ 6 ರಿಂದ ಯಕ್ಷಗಾನ ತಾಳಮದ್ದಳೆ, 7 ರಿಂದ ಅಂಕುರಪೂಜೆ, ಸೋಪಾನ ಪೂಜೆ, ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಭೋಜನ ನಡೆಯಲಿದೆ.
ಜ.30 ರಂದು ಬೆಳಿಗ್ಗೆ 5 ರಿಂದ ಗಣಪತಿಹೋಮ, ಕವಾಟೋದ್ಘಾಟನೆ, ಶಾಂತಿಹೋಮ ಕಲಶ, ಪ್ರಾಯಶ್ಚಿತಹೋಮ ಕಲಶ, ತತ್ವಹೋಮ ಕಲಶಾಭಿಷೇಕ ನಡೆಯಲಿದೆ. ಬಳಿಕ 9.10ರ ಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ, ಅವಭೃತ ಪ್ರೋಕ್ಷಣೆ, 12.30 ರಿಂದ ಮಹಾಪೂಜೆ, ಮಂತ್ರಾಕ್ಷಣೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ನರೇಶ್ ರೈ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಬ್ಯಾಂಕ್ ಪ್ರಧಾನ ಪ್ರಬಂಧಕ ಮಹಾಲಿಂಗೇಶ್ವರ ಕೆ, ಜಿ.ಪಂ.ಸದಸ್ಯೆ ಶೈಲಜಾ ಭಟ್, ಬ್ಲಾ.ಪಂ. ಸದಸ್ಯೆ ಅಶ್ವಿನಿ ಭಟ್, ನಗರಸಭೆ ಸದಸ್ಯ ಸವಿತ ಐ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಧಾರ್ಮಿಕ ಮುಂದಾಳು ವಸಂತ ಪೈ ಬದಿಯಡ್ಕ ಸಮಾರೋಪ ಭಾಷಣ ಮಾಡುವರು. ಮಹಿಳಾ ಘಟಕದ ಗೌರವಾಧ್ಯಕ್ಷೆ ಮೈನಾ ಜಿ. ರೈ, ರಾಜೇಶ್ವರಿ ಉಳಿಪ್ಪಾಡಿಗುತ್ತು, ಪೆರ್ವ ಕೃಷ್ಣ ಭಟ್, ರಾಮಕೃಷ್ಣ ಮಯ್ಯ ಉಪಸ್ಥಿತರಿರುವರು. ರಾತ್ರಿ 8 ರಿಂದ ದೀಪೋತ್ಸವ, ವಿಶೇಷ ಕಾರ್ತಿಕ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನದೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.




