ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮದ ಐದನೇ ಆವೃತ್ತಿಯಲ್ಲಿ ಭಾಗವಹಿಸಲು ನೋಂದಣಿಯ ಅವಧಿಯನ್ನು ಫೆಬ್ರುವರಿ 3ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.
0
samarasasudhi
ಜನವರಿ 28, 2022
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮದ ಐದನೇ ಆವೃತ್ತಿಯಲ್ಲಿ ಭಾಗವಹಿಸಲು ನೋಂದಣಿಯ ಅವಧಿಯನ್ನು ಫೆಬ್ರುವರಿ 3ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.
ಇದು ಪ್ರಧಾನಿ ಜೊತೆಗಿನ ಸಂವಾದ ಕಾರ್ಯಕ್ರಮವಾಗಿದ್ದು ದೇಶದಾದ್ಯಂತ ಮತ್ತು ಸಾಗರದಾಚೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ಅಧ್ಯಾಪಕರು ಪರೀಕ್ಷಾ ಒತ್ತಡದಿಂದ ಪಾರಾಗುವ ಬಗ್ಗೆ ಪ್ರಧಾನಿ ಜೊತೆ ಸಂವಾದ ನಡೆಸುತ್ತಾರೆ' ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದರು.
2018ರ ಫೆಬ್ರುವರಿ 16ರಂದು ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮದ ಮೊದಲನೇ ಆವೃತ್ತಿಯನ್ನು ಇಲ್ಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.