HEALTH TIPS

ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,488ಕ್ಕೆ ಏರಿಕೆ

           ನವದಹಲಿ: ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,488 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

          ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,488ಕ್ಕೆ ಏರಿಕೆಯಾಗಿದೆ. ಈ ವರೆಗೂ 2,162 ಮಂದಿ ಗುಣಮುಖರಾಗಿದ್ದಾರೆಂದು ತಿಳಿಸಿದೆ.

             ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

          ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೆ 1,367 ಮಂದಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 734 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದೆ.

          ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿರುವ ಇತರ ರಾಜ್ಯಗಳೆಂದರೆ ರಾಜಸ್ಥಾನ 792, ದೆಹಲಿ 549, ಕೇರಳ 486, ಕರ್ನಾಟಕ 479, ಪಶ್ಚಿಮ ಬಂಗಾಳ 294, ಉತ್ತರಪ್ರದೇಶ 275, ತೆಲಂಗಾಣ 260, ಗುಜರಾತ್ 236, ತಮಿಳುನಾಡು 185, ಒಡಿಶಾ 169, ಹರಿಯಾಣ 162, ಆಂಧ್ರಪ್ರದೇಶ 61, ಮೇಘಾಲಯ 31, ಬಿಹಾರ 27, ಪಂಜಾಬ್ 27, ಜಮ್ಮು ಮತ್ತು ಕಾಶ್ಮೀರ 23, ಗೋವಾ 21, ಮಧ್ಯಪ್ರದೇಶ 10, ಅಸ್ಸಾಂ 9, ಉತ್ತರಾಖಂಡ 8, ಚತ್ತೀಸ್ಗಢ 5, ಅಂಡಮಾನ್ ಮತ್ತು ನಿಕೋಬಾರ್ 3, ಚಂಡೀಗಢ3 ಹಾಗೂ ಲಡಾಖ್, ಪಾಂಡಿಚೆರಿಯಲ್ಲಿ ತಲಾ 2 ಪ್ರಕರಣಗಳು ವರದಿಯಾಗಿವೆ. ಅಂತೆಯೇ ಹಿಮಾಚಲಪ್ರದೇಶ, ಮಣಿಪುರದಲ್ಲಿ ತಲಾ ಒಂದು ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.

         ಏತನ್ಮಧ್ಯೆ, ಭಾರತವು ಕಳೆದ 24 ಗಂಟೆಗಳಲ್ಲಿ 2,47,417 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದ್ದು ಸಕ್ರಿಯ ಪ್ರಕರಣಗಳು ಪ್ರಸ್ತುತ 11,17,531ಕ್ಕೇರಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries