ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಕೋರೋನ ಕಾರಣದಿಂದ ಈ ವರ್ಷವೂ ಗಣರಾಜ್ಯೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಇದರಂಗವಾಗಿ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮ ಪಿ ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಮಾತೆಯರ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಪ್ರಫುಲ್ಲ ಕುಮಾರಿ ಪೆÇಯ್ಯೆಲ್, ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.

