ನವದೆಹಲಿ: ಐಎಎಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜನೆಗೊಳಿಸುವ ನಿರ್ಧಾರದ ಕುರಿತ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ಬಿಜೆಪಿಯೇತರ 9 ರಾಜ್ಯ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ. ಆದರೆ, 8 ರಾಜ್ಯಗಳು ಒಪ್ಪಿಗೆ ನೀಡಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
0
samarasasudhi
ಜನವರಿ 27, 2022
ನವದೆಹಲಿ: ಐಎಎಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜನೆಗೊಳಿಸುವ ನಿರ್ಧಾರದ ಕುರಿತ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ಬಿಜೆಪಿಯೇತರ 9 ರಾಜ್ಯ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ. ಆದರೆ, 8 ರಾಜ್ಯಗಳು ಒಪ್ಪಿಗೆ ನೀಡಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಸಂಬಂಧಿಸಿದ ಸೇವಾ ನಿಯಮಗಳಲ್ಲಿ ಬದಲಾವಣೆ ಮಾಡುವ ಪ್ರಸ್ತಾವಕ್ಕೆ ಇನ್ನೂ ಪ್ರತಿಕ್ರಿಯೆ ನೀಡದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜ್ಞಾಪನಾಪತ್ರ ಕಳುಹಿಸಲಾ ಗುವುದು ಎಂದು ಅವರು ತಿಳಿಸಿದ್ದಾರೆ.
ಒಡಿಶಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ತೆಲಂಗಾಣ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ರಾಜಸ್ಥಾನ ರಾಜ್ಯಗಳು ಸೇವಾ ನಿಯಮಗಳಲ್ಲಿನ ತಿದ್ದುಪಡಿಗಳ ವಿರುದ್ಧ ಧ್ವನಿ ಎತ್ತಿವೆ. ಮತ್ತೊಂದೆಡೆ, ಅರುಣಾಚಲ ಪ್ರದೇಶ, ಮಣಿಪುರ, ತ್ರಿಪುರಾ, ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಹರಿಯಾಣ ಮತ್ತು ಹಿಮಾಚಲ ಪ್ರದೇಶಗಳು ತಮ್ಮ ಒಪ್ಪಿಗೆ ನೀಡಿವೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಮತ್ತು ಮೇಘಾಲಯವು ಈ ಮೊದಲು, ಕಳೆದ ತಿಂಗಳು ಕಳುಹಿಸಲಾಗಿದ್ದ ಪ್ರಸ್ತಾವವನ್ನು ವಿರೋಧಿಸಿದ್ದವು. ಬಿಹಾರ ಕೂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಪರಿಷ್ಕೃತ ಪ್ರಸ್ತಾವವನ್ನು ಕಳುಹಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.