ಬದಿಯಡ್ಕ: ಆಲಂಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಅಮೃತಹಸ್ತದಿಂದ ನಡೆಯಿತು. ಬೆಳಗ್ಗೆ ಮಹಾಗಣಪತಿ ಹೋಮ ನಡೆಯಿತು.
10 ಗಂಟೆಗೆ ಎಡನೀರು ಶ್ರೀಗಳಿಗೆ ಪೂರ್ಣಕುಂಭ ಸ್ವಾಗತವನ್ನು ನೀಡಿ ಬರಮಾಡಿಕೊಳ್ಳಲಾಯಿತು. 10.22ರ ಮೀನಲಗ್ನ ಶುಭಮುಹೂರ್ತದಲ್ಲಿ ಗಭರ್Àಗುಡಿಯ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.




