HEALTH TIPS

ಕುಕ್ಕಂಕೂಡ್ಲು ಶ್ರೀಕ್ಷೇತ್ರದ ಬ್ರಹ್ಮಕಲಶೋತ್ಸವ ಇಂದಿನಿಂದ

        ಬದಿಯಡ್ಕ: ನೀರ್ಚಾಲು ಸಮೀಪದ ಕಕ್ಕಂಕೂಡ್ಲು ಶ್ರೀಕಂಠಪ್ಪಾಡಿ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳೊಂದಿಗೆ ಇಂದಿನಿಂದ (ಜ.22) 30ರ ವರೆಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. 

          ಕಾರ್ಯಕ್ರಮದ ಅಂಗವಾಗಿ ಇಂದು ಬೆಳಿಗ್ಗೆ 8ಕ್ಕೆ ಗಣಪತಿ ಹವನ, 9.30 ರಿಂದ ಉಗ್ರಾಣ ಮುಹೂರ್ತ, 10.30 ರಿಂದ ಭಜನೆ, 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 5.30 ರಿಂದ ತಂತ್ರಿವರ್ಯರ ಆಗಮನ, ಪೂರ್ಣಕುಂಭ ಸ್ವಾಗತ, ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹ ವಾಚನ, ಪ್ರಾಸಾದ ಶುದ್ದಿ, ಅಂಕುರಾರೋಹಣ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ ಹಾಗೂ ವಾಸ್ತು ಪುಣ್ಯಾಹಂತ ನಡೆಯಲಿದೆ. 6 ಕಕೆ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಆಗಮನ, ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀಗಳು ಆಶೀರ್ವಚನ ನೀಡುವರು.     ಶ್ರೀಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ನ್ಯಾಯವಾದಿ ಗೌರೀಶಂಕರ ರೈ,  ಅಧ್ಯಕ್ಷತೆ ವಹಿಸುವರು. ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್, ಉಡುಪಿ ಪೂರ್ಣಪ್ರಜ್ಞ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಕೃಷ್ಣ ಕೊಳತ್ತಾಯ, ಹಿರಿಯ ಜ್ಯೋತಿಷ್ಯ ವಿದ್ವಾಂಸ ಕುಂಜಾರು ವೆಂಕಟೇಶ್ವರ ಭಟ್ ಪಾಲಕ್ಕಾಡ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಅವರು ಧಾರ್ಮಿಕ ಉಪನ್ಯಾಸ ನೀಡುವರು. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.

             ನಾಳೆ ಬೆಳಿಗ್ಗೆ 6 ರಿಂದ ಗಣಪತಿಹೋಮ, ಪ್ರಾಯಶ್ಚಿತ ಹೋಮ, ಚತುಘಶುದ್ದಿ, ಧಾರಾ ಆವಗಾಹ ಪಂಚಕ, ಅಂಕುರಪೂಜೆ ನಡೆಯಲಿದೆ. 10.30 ರಿಂದ ಭಜನೆ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 6ಕ್ಕೆ ಭಜನೆ, 6ರಿಂದ ಹೋಮ, ಕಲಶಾಭಿಷೇಕ, ಅಂಕುರಪೂಜೆ, ರಾತ್ರಿ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries