ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್ (92) ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
0
samarasasudhi
ಜನವರಿ 11, 2022
ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್ (92) ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಕೊರೊನಾ ವೈರಸ್ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕೆಯ ಕಾರಣಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿರುವುದು ತಿಳಿದು ಬಂದಿರುವುದಾಗಿ ಎಎನ್‌ಐ ಟ್ವೀಟಿಸಿದೆ.
'ಲತಾ ಮಂಗೇಶ್ಕರ್ ಅವರ ವಯಸ್ಸಿನ ಕಾರಣದಿಂದಾಗಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಖಾಸಗಿತನಕ್ಕೆ ಅವಕಾಶ ನೀಡಿ ಹಾಗೂ ದೀದಿಗಾಗಿ ನಿಮ್ಮ ಪ್ರಾರ್ಥನೆಗಳಿರಲಿ' ಎಂದು ಲತಾ ಮಂಗೇಶ್ಕರ್ ಅವರ ಸೋದರ ಸೊಸೆ ರಚನಾ ಹೇಳಿದ್ದಾರೆ.