HEALTH TIPS

ಕುಕ್ಕೆ ಸುಬ್ರಮಣ್ಯದಲ್ಲಿ ಸೇವೆಗಳು ಸ್ಥಗಿತ

           ಮಂಗಳೂರು; ಹೊಸ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದಾಗಿ ಕರ್ನಾಟಕದಲ್ಲಿ ಜನಸಂದಣಿ ಸೇರುವನ್ನು ತಡೆಯಲು ಅನೇಕ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ನಿಯಮಗಳ ಪ್ರಭಾವ ದೇವಾಲಯಗಳ ಮೇಲೂ ಬಿದ್ದಿದೆ.

           ಸರ್ಕಾರ ಹಬ್ಬ, ಜಾತ್ರೆ, ಉತ್ಸವಗಳನ್ನು ನಿರ್ಬಂಧಿಸಿದೆ. ದೇವಸ್ಥಾನಗಳಲ್ಲೂ ಕೇವಲ ದರ್ಶನ ಮಾತ್ರ ಎಂಬ ನಿಯಮ ತಂದಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಜನವರಿ 16ರವರೆಗೆ ಕೇವಲ‌‌ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

            ಈ ಬಗ್ಗೆ ದೇವಸ್ಥಾನದ‌ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ ಮತ್ತು ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ಹರಡುವಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಆದೇಶ ಸಂಖ್ಯೆ RD 158 TNR 2000, ದಿನಾಂಕ 14-01-2022ರ ಪ್ರಕಾರ ದಿನಾಂಕ 6-01-2022 ರಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳ ಯಾವುದೇ ಸೇವಾದಿಗಳು ನಡೆಸಲ್ಪಡುವುದಿಲ್ಲ ಎಂದು ಹೇಳಿದೆ.
              ಶ್ರೀ ದೇವಳಕ್ಕೆ ಬರುವ ಭಕ್ತಾದಿಗಳಿಗೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶವಿರುತ್ತದೆ ಹಾಗೂ ವಾರಾಂತ್ಯದಲ್ಲಿ ಶುಕ್ರವಾರ ರಾತ್ರಿ ಗಂಟೆ 10 ರಿಂದ ಸೋಮವಾರ ಬೆಳಗ್ಗೆ ಗಂಟೆ 5 ಗಂಟೆಯ ತನಕ ವೀಕ್‌ಎಂಡ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
             ಎರಡು ಡೋಸ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶವಿದೆ. ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಮತ್ತಿತರ ಕೋವಿಡ್ ನಿಯಂತ್ರಣದ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ. ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಆಡಳಿತ ಮಂಡಳಿ ವಿನಂತಿ ಮಾಡಿದೆ. ಹೀಗಾಗಿ ಕುಕ್ಕೆ‌ಸುಬ್ರಹ್ಮಣ್ಯದಲ್ಲಿ ವಾರದ ದಿನಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ ದರ್ಶನಕ್ಕೂ‌ ನಿರ್ಬಂಧ ವಿಧಿಸಲಾಗಿದೆ.ಇನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಇದೇ ಮಾದರಿ ಜಾರಿಯಾಗುವ ಸಾಧ್ಯತೆಗಳಿವೆ. ಹರಕೆ, ಮುಡಿ ಸೇವೆ ಸೇರಿದಂತೆ ಇತರ ಸೇವೆಗಳು ಸದ್ಯ ಸ್ಥಗಿತವಾಗುವ ಸಾಧ್ಯತೆಗಳಿವೆ. ಭಕ್ತರ ಸಂಖ್ಯೆಗೂ ಕಡಿವಾಣ ಹಾಕಬೇಕಿರೋದರಿಂದ‌‌ ಧರ್ಮಸ್ಥಳದ ಆಡಳಿತ ಮಂಡಳಿ ಯಾವ ಕ್ರಮ‌ಕೈಗೊಳ್ಳುತ್ತದೆ ಎನ್ನೋದು ಇನ್ನಷ್ಟೇ ತಿಳಿದುಬರಬೇಕಿದೆ. ಇನ್ನು ಕೊರೊನಾ ಕರ್ಫ್ಯೂ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಜಿಲ್ಲೆಯ ಜನರು ಆರೋಗ್ಯದ ದೃಷ್ಟಿಯ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಜಿಲ್ಲೆಯಲ್ಲಿ 1 ಲಕ್ಷ ಕ್ಕೂ ಹೆಚ್ಚಿನವರು ಈ ವರೆಗೂ ಒಂದು ಡೋಸ್ ಲಸಿಕೆಯ‌ನ್ನೂ ಪಡೆದಿಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಎಲ್ಲರೂ ಲಸಿಕೆ ಪಡೆಯಬೇಕೆಂದು ಕರೆ ನೀಡಿದ್ದಾರೆ.
            ವಾರಾಂತ್ಯದ ಕರ್ಫ್ಯೂ ಸಂದರ್ಭ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರಿಗೆ ನಿರ್ಬಂಧ ಮಾಡಲಾಗಿದ್ದು, ದೇವಾಲಯಗಳಲ್ಲಿ ಕೇವಲ ಸಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಇತರ ದಿನದಲ್ಲಿ ಕೇವಲ ದರ್ಶನದ ವ್ಯವಸ್ಥೆ ಮಾತ್ರ ಮಾಡಲಾಗುತ್ತದೆ. ಇನ್ನು ದೇವಸ್ಥಾನಗಳಲ್ಲಿ ನಡೆಯುವ‌ ಅನ್ನಸಂತರ್ಪಣೆ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕಂಬಳ, ಕೋಲ , ಯಕ್ಷಗಾನ ಕಾರ್ಯಕ್ರಮ ಮುಂದೂಡಬೇಕು. ಪೂರ್ವ ನಿಗದಿತ ಮದುವೆ ಕಾರ್ಯಕ್ರಮದಲ್ಲಿ ಕೇವಲ 200 ಜನರಿಗೆ ಮಾತ್ರ ಅವಕಾಶ ನೀಡಿದ್ದೇವೆ. ಈಗಾಗಲೇ ಪೂರ್ವ ನಿರ್ಧರಿತವಾಗಿರುವ ಕಾರ್ಯಕ್ರಮಕ್ಕೆ ಈ ವಾರದಲ್ಲಿ ಅವಕಾಶ ನೀಡಲಾಗಿದೆ. ಮುಂದಿನ ವಾರದಿಂದ ವಾರಾಂತ್ಯದ ಕರ್ಫ್ಯೂ ಬಿಗಿಗೊಳಿಸುತ್ತೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries