HEALTH TIPS

ಅಯೋಧ್ಯೆ ಅಲ್ಲ, ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧೆ?

            ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಶನಿವಾರ ಪ್ರಕಟಿಸಿದೆ.

                 ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟಿಸಿದೆ.


            ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಧರ್ಮೇಂದ್ರ ಪ್ರಧಾನ್ ಅವರು ಮೊದಲ ಹಂತದ 57 ಹಾಗೂ ಎರಡನೇ ಹಂತದ 38 ಸೀಟುಗಳಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದರು.

           ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಅಥವಾ ಮಥುರಾ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ವರದಿಗಳು ಬಂದಿದ್ದವು. ಆದರೆ 2017ರ ವರೆಗೆ ಸತತ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಪ್ರಬಲ ಕ್ಷೇತ್ರದಿಂದಲೇ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಲು ಪಕ್ಷವು ನಿರ್ಧರಿಸಿದೆ.

              ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

           ಫೆಬ್ರುವರಿ 10ರಂದು ಮೊದಲನೇ ಹಂತ, ಫೆ.14ರಂದು ಎರಡನೇ, ಫೆ.20ರಂದು ಮೂರನೇ, ಫೆ. 23ರಂದು ನಾಲ್ಕನೇ, ಫೆ.27ರಂದು ಐದನೇ, ಮಾರ್ಚ್ 03ರಂದು ಆರನೇ ಮತ್ತು ಮಾ. 07ರಂದು ಏಳನೇ ಹಂತದ ಮತದಾನವು ನಡೆಯಲಿದೆ. ನಂತರ ಮಾರ್ಚ್ 10ರಂದು ಮತ ಎಣಿಕೆ ಜರುಗಲಿದ್ದು, ರಾಜಕೀಯ ಮುಖಂಡರ ಭವಿಷ್ಯ ನಿರ್ಧಾರವಾಗಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries