ಬದಿಯಡ್ಕ: ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕುಕ್ಕಂಕೂಡ್ಲು ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜ.25 ರಂದು ಮಂಗಳವಾರ ಬೆಳಿಗ್ಗೆ 6 ರಿಂದ ಗಣಪತಿಹೋಮ, ತತ್ವಕಲಶ, ತತ್ವಹೋಮ, ಅನುಜ್ಞಾ ಕಲಶಾಭಿಷೇಕ, ಅಂಕುರಪೂಜೆ, ತ್ರಿಕಾಲ ಪೂಜೆ ನಡೆಯಿತು. 10.30 ರಿಂದ ನೀರ್ಚಾಲಿನ ಶ್ರೀಧರ್ಮಶಾಸ್ತ ಭಜನಾ ತಂಡದವರಿಂದ ಭಜನೆ ನಡೆಯಿತು. ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು. ಸಂಜೆ 6 ರಿಂದ ವಿಷ್ಣುಪ್ರಕಾಶ ಪೆರ್ವ ತಂಡದವರಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು. 6 ರಿಂದ ಅನುಜ್ಞಾ ಬಲಿ, ಕ್ಷೇತ್ರಪಾಲನಲ್ಲಿ ಅನುಜ್ಞಾ ಪ್ರಾರ್ಥನೆ, ಅಂಕುರಪೂಜೆ, ತ್ರಿಕಾಲ ಪೂಜೆ, ಬಿಂಬ ಶುದ್ದಿ, ಕಲಶಪೂಜೆ ವಿಧಿವಿಧಾನಗಳು ನೆರವೇರಿದವು. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು.
ಇಂದಿನ ಕಾರ್ಯಕ್ರಮ: ಜ.26 ರಂದು ಬೆಳಿಗ್ಗೆ 6 ರಿಂದ ಗಣಪತಿಹೋಮ, ತ್ರಿಕಾಲ ಪೂಜೆ, ಸಂಹಾರ ತತ್ವಹೋಮ, ತ್ರಿಕಾಲಪೂಜೆ, ಸಂಹಾರ ತತ್ವಹೋಮ, ತತ್ವಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಶಯ್ಯಾಪೂಜೆ, ತತ್ವಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋಧ್ವಾಸನೆ, ಜೀವಕಲಶ, ಶಯ್ಯೋನ್ನಯನ, ಅಂಕುರಪೂಜೆ ನಡೆಯಲಿದೆ. 10.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ, 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 5.30 ರಿಂದ ಭಜನೆ, 6 ರಿಂದ ಬಿಂಬಶುದ್ದಿ, ಕಲಶಾಭಿಷೇಕ, ಪೀಠಾಧಿವಾಸ, ಧ್ಯಾನಾಧಿವಾಸ, ಅಧಿವಾಸ ಹೋಮ, ಅಧಿವಾಸ ಬಲಿ, ತ್ರಿಕಾಲಪೂಜೆ, ಶಿರಸ್ತತ್ವ ಹೋಮ, ಪುಣ್ಯಾಹ ವಾಚನ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹ ನಡೆಯಲಿದೆ. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ನಡೆಯಲಿದೆ.

