HEALTH TIPS

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಈ ದಿನದ ಇತಿಹಾಸ ಮತ್ತು ಮಹತ್ವ

          ಪ್ರತೀ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಮಕ್ಕಳ ದಿನವನ್ನು ಆಚರಿಸಲಾಗುವುದು. ಹೆಣ್ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಅವರ ಶಿಕ್ಷಣ, ಆರೋಗ್ಯ, ಪೋಷಕಾಂಶಕ್ಕೆ ಪ್ರಾ,ಮುಖ್ಯತೆ ನೀಡುವುದು ಈ ಆಚರಣೆಯ ಹಿಂದಿರುವ ಉದ್ದೇಶವಾಗಿದೆ.

            ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ ಇತಿಹಾಸ: ಈ ಸಮಾಜದಲ್ಲಿ ಹೆಣ್ಣು ಹಲವು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾಳೆ, ಅವುಗಳನ್ನು ತಡೆಗಟ್ಟಲು ಹೆಣ್ಣಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. 2008ರಲ್ಲಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜನವರಿ 24ರಂದು ರಾಷ್ಟ್ರೀಯ ಹೆಣ್ಮಕ್ಕಳ ದಿನವನ್ನು ಘೋಷಿಸಿತ್ತು. ಈ ದಿನ ಹೆಣ್ಮಕ್ಕಳಿಗೆ ತಮ್ಮ ಹಕ್ಕುಗಳೇನು, ಶೋಷಣೆ ಉಂಟಾಗದಂತೆ ಮುನ್ನೆಚ್ಚರಿಕೆವಹಿಸುವುದು ಹೇಗೆ ಎಂಬೆಲ್ಲಾ ಕುರಿತು ಅನೇಕ ಕಾರ್ಯಕ್ರಮಗಲನ್ನು ಮಾಡಲಾಗುವುದು.
             ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ 2022ರ ಧ್ಯೇಯ 2019ರಿಂದ ಪ್ರತೀವರ್ಷ ಈ ದಿನವನ್ನು ಒಂದೇ ಧ್ಯೇಯ ಇಟ್ಟುಕೊಂಡು ಆಚರಿಸಲಾಗುತ್ತಿದೆ. 'ನಾಳೆಯ ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಬಲೀಕರಣ ಮಾಡುವುದು' ಎಂಬುವುದೇ ಆ ಧ್ಯೇಯವಾಗಿದೆ. 
              ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಮುಖ ಉದ್ದೇಶಗಳು

           * ಹೆಣ್ಣು ಮಕ್ಕಳು ಎದುರಿಸುತ್ತಿರುವ ಶೋಷಣೆ ಬಗ್ಗೆ ಜಾಗೃತಿ ಮೂಡಿಸುವುದು * ಅವರ ಹಕ್ಕುಗಳ ಬಗ್ಗೆ ಜಗೃತಿ ಮೂಡಿಸುವುದು * ಹೆಣ್ಣುಮಕ್ಕಳ ಶಿಕ್ಷಣ, ಆರೋಗ್ಯ ಇವುಗಳ ಪ್ರಾಮುಖ್ಯತೆ ಬಗ್ಗೆ ತಿಳಿಸುವುದು * ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು * ಕುಟುಂಬ, ಕೆಲಸದ ಸ್ಥಳ, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು.



Tags

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries