ಬದಿಯಡ್ಕ: ಹಲವು ಭಾಷೆ ಸಂಸ್ಕøತಿಗಳ ಸಂಗಮ ಭೂಮಿಯಾದ ಕಾಸರಗೋಡಿನಲ್ಲಿ ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಪ್ತ ಸ್ವರ ಕೇಂದ್ರ ಸ್ಥಾಪನೆ ಅಗತ್ಯವಾಗಿ ನಡೆಯಬೇಕಾಗಿದೆ. ಈಗಾಗಲೇ ಕೇರಳ ಸರ್ಕಾರವನ್ನು ಸಪ್ತ ಸ್ವರ ಕೇಂದ್ರ ಸ್ಥಾಪಿಸಲು ಒತ್ತಾಯಿಸಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಹೇಳಿದರು.
ಸಾಮಾಜಿಕ - ಸಾಂಸ್ಕøತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಪಿಲಿಕುಂಜೆಯಲ್ಲಿರುವ ಕಾಸರಗೋಡು ಮುನ್ಸಿಪಲ್ ಕಾನ್ಪರೆನ್ಸ್ ಹಾಲ್‍ನಲ್ಲಿ ಆಯೋಜಿಸಿದ ಸಂಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಸರಗೋಡು ನಗರಸಭಾ ಮಾಜಿ ಅಧ್ಯಕ್ಷ ಎಸ್.ಜೆ.ಪ್ರಸಾದ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಸರಗೋಡು ನಗರಸಭೆಯ ನೇತೃತ್ವದಲ್ಲಿ ನಿರಂತರವಾಗಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದರು.
ನಗರಸಭಾ ಸದಸ್ಯೆ ರಂಜಿತಾ ಮೋಹನ್‍ದಾಸ್ ಶುಭÀಹಾರೈಸಿದರು. ಈ ಸಂದರ್ಭದಲ್ಲಿ ಭರತನಾಟ್ಯ ಕಲಾವಿದೆ ಶಶಿಕಲಾ ಟೀಚರ್ ಮತ್ತು ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರಿಗೆ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜು ಹೊಸಕೋಟೆ, ಉಷಾ ಈಶ್ವರ ಭಟ್, ಮನೋಹರ ಶೆಟ್ಟಿ, ಉದಯ ಕುಮಾರ್ ಮನ್ನಿಪ್ಪಾಡಿ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.
ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೋಳಾರು ಸತೀಶ್ಚಂದ್ರ ಭಂಡಾರಿ ವಂದಿಸಿದರು. ಚಂದಿರ ಟ್ರಸ್ಟ್ ಮತ್ತು ರಂಗ ಪಯಣ ಬೆಂಗಳೂರು ಇವರಿಂದ ರಂಗ ಗೀತೆಗಳು, ಖ್ಯಾತ ಗಾಯಕಿ ಉಷಾ ಈಶ್ವರ ಭಟ್ ಅವರಿಂದ ದಾಸ ಸಂಕೀರ್ತನೆ ನಡೆಯಿತು.

