ಬದಿಯಡ್ಕ: ಮುಂಡಿತ್ತಡ್ಕ ಶ್ರೀ ಮಹಾವಿಷ್ಣು ಭಜನಾ ಸಂಘದ 32ನೇ ವಾರ್ಷಿಕೋತ್ಸವದ ಅಂಗವಾಗಿ ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಭಜನಾ ಸಂಘದ ಹಿರಿಯ ಸದಸ್ಯ ರಾಮಣ್ಣ ನಾಯ್ಕ ನೂಜಿಲ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಸಂಕೀರ್ತನೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ಪ್ರಧಾನ ಅರ್ಚಕ ಭಾಸ್ಕರ ಪೂಜಾರಿ ಬೀರಿಕುಂಜ, ಹಿರಿಯ ಸದಸ್ಯ ರಾಮ್‍ಕುಮಾರ್, ಪುರುಷೋತ್ತಮ ಉಪಸ್ಥಿತರಿದ್ದರು. ಭಜನಾ ಸಂಕೀರ್ತನೆಯ ಅಂಗವಾಗಿ ಅಶೋಕ್ ಯಂ ಅರಿಯಪ್ಪಾಡಿ ಮತ್ತು ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ಬಳಿಕ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಜರಗಿತು.

