HEALTH TIPS

ಕೊರೋನಾ ಉಲ್ಬಣ: ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಿದ ಗುಜರಾತ್ ಸರ್ಕಾರ

             ಅಹಮದಾಬಾದ್: ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಬೇಕಿದ್ದ ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಲು ರಾಜ್ಯ ಸರ್ಕಾರ ಗುರುವಾರ ನಿರ್ಧರಿಸಿದೆ ಎಂದು ಗುಜರಾತ್ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

        ಹೂಡಿಕೆಗಳನ್ನು ಆಕರ್ಷಿಸಲು ಮೂರು ದಿನಗಳ ಕಾಲ ಈ ಜಾಗತಿಕ ಸಾಮಾವೇಶ ನಡೆಸಲಾಗುತ್ತದೆ. ಇದರಲ್ಲಿ ಅನೇಕ ಪಾಲುದಾರ ದೇಶಗಳ ನಿಯೋಗಗಳು ಮತ್ತು ಉನ್ನತ ಕಂಪನಿಗಳ ಸಿಇಒಗಳು ಭಾಗವಹಿಸಬೇಕಿತ್ತು. ಆದರೆ ಕೋವಿಡ್ ನಿಂದಾಗಿ ಈ ಬಾರಿ ಮುಂದೂಡಿಕೆಯಾಗಿದೆ.

         "ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪರಿಸ್ಥಿತಿಯನ್ನು ವಿಶ್ಲೇಷಿಸಿದ ನಂತರ, ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಹರಡುವುದನ್ನು ತಡೆಯಲು ವೈಬ್ರಂಟ್ ಗುಜರಾತ್ ಸಮಾವೇಶದ 10ನೇ ಆವೃತ್ತಿಯನ್ನು ಮುಂದೂಡಲು ನಿರ್ಧರಿಸಿದ್ದಾರೆ" ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

          "ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪ್ರಪಂಚದಲ್ಲಿ ಮತ್ತು ಭಾರತದಲ್ಲಿ ಅತ್ಯಂತ ವೇಗವಾಗಿ ಹರಡುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಸಿಎಂ ಕಚೇರಿ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries