ನವದೆಹಲಿ: ಭಾರತವು ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ಹೋರಾಡಲಿದ್ದು ರಾಷ್ಟ್ರದ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
0
samarasasudhi
ಜನವರಿ 02, 2022
ನವದೆಹಲಿ: ಭಾರತವು ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ಹೋರಾಡಲಿದ್ದು ರಾಷ್ಟ್ರದ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ನಿಧಿ ಬಿಡುಗಡೆಯ ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿಯೂ 2021ರಲ್ಲಿ ಆರೋಗ್ಯ, ರಕ್ಷಣೆ ಮತ್ತು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರವು ಮಾಡಿರುವ ಸಾಧನೆಗಳನ್ನು ಉಲ್ಲೇಖಿಸಿದರು.
145 ಕೋಟಿ ಕೋವಿಡ್ ಲಸಿಕೆಯ ಡೋಸ್‌ಗಳನ್ನು ಹಂಚಿಕೆ ಮಾಡುವ ಮೂಲಕ ಭಾರತ ಮಾಡಿರುವ ಸಾಧನೆಯನ್ನು ಇದೇ ವೇಳೆ ಅವರು ಶ್ಲಾಘಿಸಿದರು.
ಕೋವಿಡ್ ನಮಗೆ ಹಲವಾರು ಸವಾಲುಗಳನ್ನು ತಂದೊಡ್ಡಿದೆ. ಆದರೆ ಅದು ಎಂದಿಗೂ ಭಾರತದ ಪ್ರಗತಿಯ ವೇಗವನ್ನು ತಡೆಯಲಾಗುವುದಿಲ್ಲ. ಸಂಪೂರ್ಣ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ಸಾಂಕ್ರಾಮಿಕದ ವಿರುದ್ಧ ಹೋರಾಡಿ ರಾಷ್ಟ್ರದ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳಲಾಗುವುದು ಎಂದು ಹೇಳಿದರು.
ಕೋವಿಡ್ ಸಮಯದಲ್ಲಿ ಕೇಂದ್ರದಿಂದ ₹ 2.6 ಲಕ್ಷ ಕೋಟಿ ವೆಚ್ಚದಲ್ಲಿ ನೀಡಿದ ಹೆಚ್ಚುವರಿ ಆಹಾರ ಧಾನ್ಯಗಳಿಂದ 80 ಕೋಟಿ ಜನರಿಗೆ ಉಪಯೋಗವಾಗಿದೆ ಎಂದೂ ಅವರು ಹೇಳಿದರು.