ನವದೆಹಲಿ: ಓಮಿಕ್ರಾನ್ ಭೀತಿಯಿಂದಾಗಿ 3ನೇ ಅಲೆಯಲ್ಲಿರುವ ಭಾರತದಲ್ಲಿ ದಿನ ಕ್ರಮೇಣ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,920 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 25,920 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ 492 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆಂದು ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,27,80,235ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,10,905ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,92,092ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 66,254 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,19,77,238ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 11,79,705 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 75,55,32,460 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,74,64,99,461 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

