HEALTH TIPS

ರಷ್ಯಾ ಆಕ್ರಮಣ: ಮೂವರು ಮಕ್ಕಳು ಸೇರಿದಂತೆ 198 ಜನರ ಸಾವು- ಉಕ್ರೇನ್ ಆರೋಗ್ಯ ಸಚಿವ

             ಕೈವ್: ರಷ್ಯಾ- ಉಕ್ರೇನ್ ಯುದ್ಧ ಆರಂಭವಾದಾಗಿನಿಂದ ಇಲ್ಲಿಯವರೆಗೂ ಮೂವರು ಮಕ್ಕಳು ಸೇರಿದಂತೆ ಒಟ್ಟಾರೇ 198 ಉಕ್ರೇನ್ ಪ್ರಜೆಗಳು ಸಾವನ್ನಪ್ಪಿರುವುದಾಗಿ ಉಕ್ರೇನ್ ಆರೋಗ್ಯ ಸಚಿವ ವಿಕ್ಟರ್ ಲಿಯಾಸ್ಕೊ ಹೇಳಿದ್ದಾರೆ.

                ರಷ್ಯಾದ ಮಿಲಿಟರಿ ಕಾರ್ಯಾಚರಣೆಯಲ್ಲಿ ಇಲ್ಲಿಯವರೆಗೂ ಉಂಟಾಗಿರುವ ನಷ್ಟದ ವಿವರಗಳನ್ನು  ಲಿಯಾಸ್ಕೋ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿದ್ದಾರೆ.ಮೂರು ದಿನಗಳ ಹೋರಾಟದಲ್ಲಿ 1, 115 ಉಕ್ರೇನ್ ಪ್ರಜೆಗಳು ಗಾಯಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಇದರಲ್ಲಿ 33 ಮಕ್ಕಳು ಕೂಡಾ ಗಾಯಗೊಂಡಿರುವುದಾಗಿ ಅವರು ಹೇಳಿರುವುದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

             ರಷ್ಯಾ ಗುರುವಾರದಿಂದ ಉಕ್ರೇನ್ ನಲ್ಲಿ ದಾಳಿ ನಡೆಸುತ್ತಿದ್ದು, ಅಲ್ಲಿನ ಮಿಲಿಟರಿ ಮೂಲಸೌಕರ್ಯಗಳನ್ನು ನಾಶಪಡಿಸುತ್ತಿದೆ. ರಷ್ಯಾದ ಮಿಲಿಟರಿ ಕಾರ್ಯಾಚರಣೆಯನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಖಂಡಿಸಿದ್ದು, ರಷ್ಯಾದ ವಿರುದ್ಧ ನಿರ್ಬಂಧಗಳನ್ನು ಹೇರುತ್ತಿದ್ದಾರೆ.  

              ನಿರ್ಬಂಧ, ರಕ್ಷಣಾ ನೆರವು ಮತ್ತು ಯುದ್ಧ ವಿರೋಧಿ ಮೈತ್ರಿ ಕುರಿತಂತೆ  ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ ಶುಕ್ರವಾರ ಅಮೆರಿಕ ಅಧ್ಯಕ್ಷ ಜೋ- ಬೈಡನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ತನ್ನ ಮೌಲ್ಯಗಳನ್ನು ಹಂಚಿಕೊಳ್ಳುವ ಯುರೋಪಿಯನ್ ರಾಷ್ಟ್ರಗಳಿಗೆ ಯಾವಾಗಲೂ ನ್ಯಾಟೋದ ಬಾಗಿಲು ತೆರೆದಿರುತ್ತದೆ ಎಂದು ಬೈಡನ್ ಶುಕ್ರವಾರ ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries