ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯ ಡಾಂಗಿವಾಚಾ ಪ್ರದೇಶದಲ್ಲಿ ಅಲ್ ಬದರ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಖಚಿತ ಮಾಹಿತಿ ಮೇರೆಗೆ ಡಾಂಗಿವಾಚಾ ಪ್ರದೇಶದಲ್ಲಿ ದಾಳಿ ನಡೆಸಿರುವ ಪೊಲೀಸರು ಈ ವೇಳೆ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಬಂಧತ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಉಗ್ರರನ್ನು ವಿಚಾರಣೆಗೊಳಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಗಡಿ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿ, ನಾಲ್ವರಿಗೆ ಗಾಯಗಳಾಗಿತ್ತು.