HEALTH TIPS

ಮೇವು ಹಗರಣದ ಐದನೇ ಪ್ರಕರಣ: ಲಾಲು ಪ್ರಸಾದ್‌ಗೆ 5 ವರ್ಷ ಜೈಲು, ₹60 ಲಕ್ಷ ದಂಡ

            ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ (ಡೊರಂಡ ಖಜಾನೆ ಪ್ರಕರಣ) ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ ವಿಧಿಸಿದೆ.

             ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಫೆಬ್ರುವರಿ 15ರಂದು ಲಾಲು ಪ್ರಸಾದ್‌ ಯಾದವ್‌ ಅವರನ್ನು ದೋಷಿ ಎಂದು ಪರಿಗಣಿಸಿತ್ತು. ಶಿಕ್ಷೆಯ ಪ್ರಮಾಣವನ್ನು ನಂತರ ಪ್ರಕಟಿಸುವುದಾಗಿ ತಿಳಿಸಿತ್ತು.


            ಈ ಪ್ರಕರಣದ ಇತರ 36ರ ಮಂದಿಗೆ ನ್ಯಾಯಾಲಯವು ಈ ಹಿಂದೆಯೇ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಿದೆ.

            ಅವಿಭಜಿತ ಬಿಹಾರದಲ್ಲಿ ನಡೆದಿದ್ದ ₹950 ಕೋಟಿ ಮೊತ್ತದ ಮೇವು ಹಗರಣದಲ್ಲಿ, ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತು. ಡೊರಂಡ ಜಿಲ್ಲಾ ಸರ್ಕಾರಿ ಖಜಾನೆಯಿಂದ ₹139 ಕೋಟಿಗಳನ್ನು ಅಕ್ರಮವಾಗಿ ಪಡೆಯಲಾಗಿತ್ತು.

ಇದೇ ಮೇವು ಹಗರಣದ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಂದ ಹಣ ಪಡೆದುಕೊಂಡ ನಾಲ್ಕು ಪ್ರಕರಣಗಳಲ್ಲಿ ಲಾಲು ಅವರಿಗೆ ಈಗಾಗಲೇ 14 ವರ್ಷಗಳ ಜೈಲು ಶಿಕ್ಷೆ ಮತ್ತು ಒಟ್ಟು ₹ 60 ಲಕ್ಷ ದಂಡ ವಿಧಿಸಲಾಗಿದೆ. ಈಗ ಶಿಕ್ಷೆ ವಿಧಿಸಿರುವುದು ಐದನೇ ಪ್ರಕರಣವಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries