ದಾಮೋಹ್ : ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ 300 ಅಡಿ ಆಳದ ತೆರೆದ ಕೊಳವೆ ಬಾವಿಯೊಂದರಲ್ಲಿ ಭಾನುವಾರ ಏಳು ವರ್ಷದ ಬಾಲಕನೊಬ್ಬ ಬಿದ್ದಿದ್ದಾನೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
0
samarasasudhi
ಫೆಬ್ರವರಿ 27, 2022
ದಾಮೋಹ್ : ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ 300 ಅಡಿ ಆಳದ ತೆರೆದ ಕೊಳವೆ ಬಾವಿಯೊಂದರಲ್ಲಿ ಭಾನುವಾರ ಏಳು ವರ್ಷದ ಬಾಲಕನೊಬ್ಬ ಬಿದ್ದಿದ್ದಾನೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ದಾಮೋಹ್ ಜಿಲ್ಲಾ ಕೇಂದ್ರದಿಂದ ಸುಮಾರು 45 ಕಿ.ಮೀ. ದೂರದ ಪಟೇರಾ ಪೊಲಿಸ್ ಠಾಣಾ ವ್ಯಾಪ್ತಿಯ ಬಾರ್ಖೇಡಾ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.
ಬಾಲಕ ಪ್ರಿಯಾಂಶ್ ಭಾನುವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ತಮ್ಮ ಜಮೀನಿನಲ್ಲಿ ಆಟವಾಡುತ್ತಿದ್ದಾಗ ತಂದೆ ಧರ್ಮೇಂದ್ರ ಅತ್ಯಾ ಅವರು ತೋಡಿದ ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ಪಟೇರಾ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಬಿಹಾರಿ ಮಿಶ್ರಾ ಅವರು ಹೇಳಿದರು.
ಬಾಲಕ ಪ್ರಿಯಾಂಶ್ ಕೊಳವೆ ಬಾವಿಯ 10-15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಥಳೀಯ ಆಡಳಿತದ ತಂಡ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಬಿಹಾರಿ ಮಿಶ್ರಾ ಹೇಳಿದರು.
ಉಮಾರಿಯಾ ಜಿಲ್ಲೆಯ ಬದರ್ಚಾಡ್ ಗ್ರಾಮದಲ್ಲಿ ಕಳೆದ ಗುರುವಾರ 200 ಅಡಿ ಆಳದ ಕೊಳವೆ ಬಾವಿಗೆ ಮೂರು ವರ್ಷದ ಬಾಲಕ ಬಿದ್ದಿದ್ದನು. ಸತತ 16 ಗಂಟೆಗಳ ಕಾರ್ಯಾಚರಣೆ ನಂತರ ಬಾಲಕನನ್ನು ಹೊರೆತೆಗೆಯಲಾಯಿತು. ಆದರೆ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ.