ನವದೆಹಲಿ: ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಶೀಘ್ರವೇ ಕೈಗೆತ್ತಿಕೊಳ್ಳಲು ಪರಿಶೀಲಿಸಲಾಗುವುದು ಎಂದು ಸುಪ್ರೀಂಕೋರ್ಟ್ ಬುಧವಾರ ತಿಳಿಸಿದೆ.
0
samarasasudhi
ಫೆಬ್ರವರಿ 09, 2022
ನವದೆಹಲಿ: ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಶೀಘ್ರವೇ ಕೈಗೆತ್ತಿಕೊಳ್ಳಲು ಪರಿಶೀಲಿಸಲಾಗುವುದು ಎಂದು ಸುಪ್ರೀಂಕೋರ್ಟ್ ಬುಧವಾರ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠಕ್ಕೆ ಅರ್ಜಿ ಸಲ್ಲಿಸಿರುವ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಈ ಕುರಿತು ತುರ್ತು ವಿಚಾರಣೆ ನಡೆಸಬೇಕಾದ ಅಗತ್ಯವಿದೆ ಎಂದು ಕೋರಿದರು.
ಹಾಲಿ ಮತ್ತು ಮಾಜಿ ಸಂಸದರು ಹಾಗೂ ಶಾಸಕರ ವಿರುದ್ಧ ಸಾಕಷ್ಟು ಬಾಕಿ ಪ್ರಕರಣಗಳಿವೆ. ಹಾಗಾಗಿ ಅವುಗಳ ವಿಲೇವಾರಿ ಆಗಬೇಕಿದೆ ಎಂದು ಹನ್ಸಾರಿಯಾ ಮನವಿ ಮಾಡಿದರು.
ಇತ್ತೀಚಿನ ವರದಿಯ ಪ್ರಕಾರ ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ 4,984 ಪ್ರಕರಣಗಳು ಬಾಕಿ ಇವೆ. ಇವುಗಳಲ್ಲಿ 1,899 ಪ್ರಕರಣಗಳು ಐದು ವರ್ಷಗಳಿಗಿಂತ ಹಳೆಯವಾಗಿವೆ.