HEALTH TIPS

ಬಹುಕೋಟಿ ರೂ. ಮೇವು ಹಗರಣ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ; ವಿಶೇಷ ಸಿಬಿಐ ಕೋರ್ಟ್ ತೀರ್ಪು

      ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ RJD ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯ ಮಂಗಳವಾರ ದೋಷಿ ಎಂದು ಪ್ರಕಟಿಸಿದೆ.

     ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿದೆ.ಇಂದು ಬೆಳಗ್ಗೆ ಸಿಬಿಐ ವಿಶೇಷ ನ್ಯಾಯಾಲಯ ಮುಂದೆ ವಿಚಾರಣೆಗೆ ಲಾಲೂ ಪ್ರಸಾದ್ ಯಾದವ್ ಆಗಮಿಸಿದ್ದರು. 

     ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಎಸ್‌ಕೆ ಶಶಿ ಅವರು 6 ಮಹಿಳೆಯರು ಸೇರಿದಂತೆ 24 ಆರೋಪಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಖುಲಾಸೆಗೊಳಿಸಿದ್ದಾರೆ.

     ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಇಂದು ತೀರ್ಪು ವೇಳೆ ಪ್ರಕಟಿಸಿದೆ.

     ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಭೌತಿಕವಾಗಿ ಹಾಜರಾಗಲು ನಿನ್ನೆ ರಾಂಚಿಗೆ ಆಗಮಿಸಿದ್ದರು.

      ಕಳೆದ ಜನವರಿ 29ರಂದು ಲಾಲೂ ಪ್ರಸಾದ್ ಯಾದವ್ ಅವರನ್ನು ಒಳಗೊಂಡಿರುವ 139.35 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಅವ್ಯವಹಾರ ಪ್ರಕರಣದ ವಾದಗಳನ್ನು ಆಲಿಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ವಿಶೇಷ ಸಿಬಿಐ(ಕೇಂದ್ರ ತನಿಖಾ ದಳ)ನ್ಯಾಯಾಧೀಶ ಎಸ್ ಕೆ ಶಶಿ ಅವರು ಪ್ರಸಾದ್ ಸೇರಿದಂತೆ 99 ಆರೋಪಿಗಳ ವಿರುದ್ಧ ಕಳೆದ ವರ್ಷ ಫೆಬ್ರವರಿಯಿಂದ ಕೈಗೊಂಡಿದ್ದ ವಿಚಾರಣೆಯನ್ನು ಇದೀಗ ಪೊರ್ಣಗೊಳಿಸಲಾಯಿತು. 

      ಕೊನೆಯ ಆರೋಪಿ ಶೈಲೇಂದ್ರ ಕುಮಾರ್ ಪರವಾಗಿ ಜನವರಿ 29ರಂದು ವಾದವನ್ನು ಪೂರ್ಣಗೊಳಿಸಲಾಯಿತು. ತೀರ್ಪಿನ ದಿನದಂದು ಎಲ್ಲಾ ಆರೋಪಿಗಳನ್ನು ನ್ಯಾಯಾಲಯದಲ್ಲಿ ಭೌತಿಕವಾಗಿ ಹಾಜರುಪಡಿಸಲು ಆದೇಶಿಸಲಾಗಿತ್ತು. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries