HEALTH TIPS

ಪಂಜಾಬ್‌ ಪಾಲಿಟಿಕ್ಸ್ ಟಿವಿಯ ಆಯಪ್‌, ವೆಬ್‌ಸೈಟ್‌, ಸೋಶಿಯಲ್ ಮೀಡಿಯಾ ನಿರ್ಬಂಧ

           ನವದೆಹಲಿ: ನಿಷೇಧಿತ ಸಂಘಟನೆಯಾದ ಸಿಖ್ಸ್‌ ಫಾರ್‌ ಜಸ್ಟೀಸ್‌ನೊಂದಿಗೆ (ಎಸ್‌ಎಫ್‌ಜೆ) ಸಂಪರ್ಕ ಹೊಂದಿರುವ ವಿದೇಶಿ ಮೂಲದ ಸುದ್ದಿವಾಹಿನಿ 'ಪಂಜಾಬ್‌ ಪಾಲಿಟಿಕ್ಸ್ ಟಿವಿ'ಯ ಅಪ್ಲಿಕೇಶನ್‌ಗಳು, ವೆಬ್‌ಸೈಟ್‌ ಮತ್ತು ಸಾಮಾಜಿಕ ಜಾಲತಾಣದ ಎಲ್ಲಾ ಖಾತೆಗಳ ಮೇಲೆ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಂಗಳವಾರ ನಿರ್ಬಂಧ ವಿಧಿಸಿದೆ.

           ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರಲು ಆನ್‌ಲೈನ್‌ ವೇದಿಕೆಯನ್ನು ಬಳಸಿದ ಆರೋಪದಲ್ಲಿ ಪ್ರಸಾರ ಸಚಿವಾಲಯ ಈ ಕ್ರಮ ಕೈಗೊಂಡಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರಡಿ ಎಸ್‌ಎಫ್‌ಜೆ ಸಂಘಟನೆಯನ್ನು ನಿಷೇಧಿಸಲಾಗಿದೆ.

             'ಈಗ ನಡೆಯುತ್ತಿರುವ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಂಜಾಬ್‌ ರಾಜಕೀಯ ವಾಹಿನಿಯು ತನ್ನ ಆನ್‌ಲೈನ್‌ ವೇದಿಕೆಯನ್ನು ಬಳಸಿಕೊಂಡು ಸಾರ್ವಜನಿಕ ಹಿತಾಸಕ್ತಿಗೆ ಭಂಗ ತರಲು ಪ್ರಯತ್ನಿಸುತ್ತಿದೆ ಎಂದು ಗುಪ್ತಚರ ಮೂಲಗಳು ನೀಡಿದ ಮಾಹಿತಿ ಮೇರೆಗೆ ಸಚಿವಾಲಯವು ಐಟಿ ನಿಯಮಗಳ ತುರ್ತು ಅಧಿಕಾರವನ್ನು ಬಳಸಿಕೊಂಡು ಫೆಬ್ರುವರಿ 18 ರಂದು ವಾಹಿನಿಯ ಎಲ್ಲಾ ಡಿಜಿಟಲ್‌ ಮೂಲಗಳನ್ನು ನಿರ್ಬಂಧಿಸಲಾಗಿದೆ' ಎಂದು ಸಚಿವಾಲಯ ಹೇಳಿದೆ.

             ನಿರ್ಬಂಧಿಸಲಾದ ಆಯಪ್‌ಗಳು, ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ಪ್ರಸಾರವಾದ ಸುದ್ದಿಗಳು ಕೋಮುದ್ವೇಷ ಮತ್ತು ಪ್ರತ್ಯೇಕತಾವಾದವನ್ನು ಪ್ರಚೋದಿಸುತ್ತವೆ. ಇದು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಕಾರಕ. ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಇದು ಅಪಾಯಕಾರಿ ಕಂಡು ಬಂದಿದೆ ಎಂದು ಸಚಿವಾಲಯ ಉಲ್ಲೇಖಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries