ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿರುವ ಮುಂಬೈನ ವಿವಿಧ ತಾಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ.
0
samarasasudhi
ಫೆಬ್ರವರಿ 15, 2022
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿರುವ ಮುಂಬೈನ ವಿವಿಧ ತಾಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ.
ದಾವೂದ್ ಸಹೋದರಿ ಹಸೀನಾ ಪಾರ್ಕರ್ ಅವರ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಮುಂಬೈನ ಸುಮಾರು 10 ತಾಣಗಳಲ್ಲಿ ಇಡಿ ಅಧಿಕಾರಿಗಳು ಬೆಳಗ್ಗಿನಿಂದಲೇ ಶೋಧ ಕಾರ್ಯ ನಡೆಸಿದ್ದಾರೆ.
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧ ಶೋಧ ನಡೆದಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ನಂಟು ಹೊಂದಿರುವ ರಾಜಕಾರಣಿ ಒಬ್ಬರ ಮನೆಯಲ್ಲೂ ಶೋಧ ನಡೆದಿದೆ ಎಂದು ಮೂಲಗಳು 'ಪಿಟಿಐ'ಗೆ ತಿಳಿಸಿವೆ.
ದಾವೂದ್ ಇಬ್ರಾಹಿಂ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಲ್ಲಿದ್ದು, ದಶಕಗಳಿಂದ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂಬ ವರದಿಗಳಿವೆ.