HEALTH TIPS

ಕೇರಳ ಸಿಎಂ ವೇದಿಕೆಯಲ್ಲಿ ಪ್ರಾರ್ಥನಾ ಗೀತೆ ಹಾಡಿದ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು

             ತಿರುವನಂತಪುರ: ಕರ್ನಾಟಕ ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹೈಕೋರ್ಟ್ ಮೆಟ್ಟಿಲೇರಿದೆ. ಈ ನಡುವೆ ನೆರೆಯ ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯಕ್ರಮದ ವೇದಿಕೆಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.


               ಈ ಕುರಿತು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹಾಗೂ ಸಂಸದ ಜಾನ್ ಬ್ರಿಟಾಸ್ ಟ್ವೀಟಿಸಿದ್ದು, 'ಕೇರಳ ನಮ್ಮ ಹೆಮ್ಮೆ' ಎಂದಿದ್ದಾರೆ.


                ತಿರುವನಂತಪುರದಲ್ಲಿ ನಡೆದ ಹೊಸ ಶಾಲಾ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಹೈಕೋರ್ಟ್ ಗುರುವಾರ ಮಧ್ಯಂತರ ಮೌಖಿಕ ಆದೇಶವನ್ನು ಹೊರಡಿಸಿದೆ. ನ್ಯಾಯಪೀಠವು ವಿಚಾರಣೆಯನ್ನು ಫೆಬ್ರುವರಿ 14ಕ್ಕೆ ಮುಂದೂಡಿದ್ದು, ಅಂತಿಮ ತೀರ್ಪು ಹೊರಬೀಳುವವರೆಗೂ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಹಾಕಿಕೊಳ್ಳಬಾರದು ಎಂದು ಸೂಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries