HEALTH TIPS

ರದ್ದುಗೊಂಡ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯೋಚನೆಯಿಲ್ಲ: ಕೇಂದ್ರ

      ನವದೆಹಲಿ: ಹಿಂತೆಗೆದುಕೊಂಡಿರುವ ಮೂರು ಕೃಷಿ ಕಾಯ್ದೆಗಳನ್ನು ಪುನಃ ಅನುಷ್ಠಾನಕ್ಕೆ ತರುವ ಯೋಚನೆ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ಥೋಮರ್‌ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

     ಭವಿಷ್ಯದಲ್ಲಿ ಪುನಃ ಮೂರು ಕೃಷಿ ಕಾಯ್ದೆಗಳನ್ನು ಚಾಲ್ತಿಗೆ ತರುವ ಯೋಚನೆ ಕೇಂದ್ರ ಸರ್ಕಾರದ ಮುಂದೆ ಇದೆಯೇ ಎಂಬ ಲಿಖಿತ ಪ್ರಶ್ನೆಗೆ, 'ಇಲ್ಲ ಸರ್‌' ಎಂದು ಸಚಿವರು ಉತ್ತರಿಸಿದ್ದಾರೆ.

     ರೈತರ ಚಳುವಳಿ ವೇಳೆ ಮೃತಪಟ್ಟ ರೈತರ ಕುಟುಂಬಕ್ಕೆ ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ರಾಜ್ಯ ಸರ್ಕಾರ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.

       ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ನವೆಂಬರ್‌ 19ರಂದು ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡಿರುವುದಾಗಿ ಘೋಷಿಸಿದ್ದರು.

           ಹಿಂತೆಗೆಯಲ್ಪಟ್ಟ ಕೃಷಿ ಕಾಯ್ದೆಗಳು
1. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಕಾಯ್ದೆ - 2020
2. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತರಿ ಮತ್ತು ಕೃಷಿ ಜಮೀನು ಸೇವೆಗಳ ಒಪ್ಪಂದ ಕಾಯ್ದೆ - 2020
3. ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ -1955


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries