ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಇತಿಹಾಸಪ್ರಸಿದ್ಧ ಶ್ರೀ ವಿಷ್ಣುಮಂಗಲ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಧ್ವಜಾರೋಹಣ ನಡೆಯಿತು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿತು. ಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ ಮುಂತಾದವರು ಉಪಸ್ಥಿತರಿದ್ದರು. ದೇವಸ್ಥಾನದಲ್ಲಿ ಫೆ. 12ರಿಂದ 16ರ ವರೆಗೆ ಉತ್ಸವ ಜರುಗಲಿದೆ. ಉಗ್ರಾಣ ಮುಹೂರ್ತ, ಶ್ರೀಭೂತಬಲಿ, ದೀಪಾರಾಧನೆ ಕಾರ್ಯಕ್ರಮಗಳು ನಡೆದವು. 16ರಂದು ಅವಭೃತ ಸ್ನಾನದೊಂದಿಗೆ ಉತ್ಸವ ಸಂಪನ್ನಗೊಳ್ಳಲಿದೆ.




