HEALTH TIPS

ಒಮ್ಮೆ ಬಳಸಬಹುದಾದ ಪ್ಲಾಸ್ಟಿಕ್‌ ಉಪಯೋಗ ತಡೆಗೆ ಭಾರತ ಬದ್ಧ: ಮೋದಿ

         ನವದೆಹಲಿ: ಒಮ್ಮೆ ಮಾತ್ರ ಬಳಸಬಹುದಾದ ಪ್ಲಾಸ್ಟಿಕ್‌ನ ಬಳಕೆ ನಿಲ್ಲಿಸುವುದಕ್ಕೆ ಭಾರತ ಬದ್ಧವಾಗಿದೆ. ಈ ಸಂಬಂಧ ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮ ಆರಂಭಿಸಲು ಫ್ರಾನ್ಸ್‌ನೊಂದಿಗೆ ಭಾರತ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.

          'ಒನ್‌ ನೇಷನ್ ಶೃಂಗಸಭೆ' ಹಿನ್ನೆಲೆಯಲ್ಲಿ ಅವರು ಬಿಡುಗಡೆ ಮಾಡಿರುವ ವಿಡಿಯೊ ಸಂದೇಶದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.

              ವಿಶ್ವಸಂಸ್ಥೆ ಹಾಗೂ ವಿಶ್ವಬ್ಯಾಂಕ್‌ ಸಹಯೋಗದಲ್ಲಿ ಫ್ರಾನ್ಸ್‌ ಈ ಶೃಂಗಸಭೆಯನ್ನು ಆಯೋಜಿಸಿದೆ.

            'ದೇಶದ ಕರಾವಳಿಯಲ್ಲಿನ ಪ್ಲಾಸ್ಟಿಕ್‌ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸಲು ಇತ್ತೀಚೆಗೆ ಬೃಹತ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೂರು ಲಕ್ಷ ಯುವಕ-ಯುವತಿಯರು ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ 13 ಟನ್‌ಗೂ ಅಧಿಕ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಂಗ್ರಹಿಸಲಾಯಿತು' ಎಂದು ಅವರು ಹೇಳಿದ್ದಾರೆ.

           'ಸಮುದ್ರದಲ್ಲಿನ ಪ್ಲಾಸ್ಟಿಕ್‌ ತ್ಯಾಜ್ಯ ತೆರವುಗೊಳಿಸುವ ಸಲುವಾಗಿ 100 ನೌಕಾ ದಿನಗಳನ್ನು ಒದಗಿಸುವಂತೆ ನೌಕಾಪಡೆಗೆ ನಿರ್ದೇಶನ ನೀಡಲಾಗಿದೆ' ಎಂದೂ ಅವರು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries