HEALTH TIPS

ಸಿಬಿಎಸ್ ಇ 10, 12ನೇ ತರಗತಿಯ ಎರಡನೆ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಆರಂಭ

              ನವದೆಹಲಿ: ಕೇಂದ್ರೀಯ ಪೌಢ ಶಿಕ್ಷ ಮಂಡಳಿ(ಸಿಬಿಎಸ್‍ಇ) 10 ಮತ್ತು 12 ನೇ ತರಗತಿಯ ಎರಡನೇ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗಲಿವೆ ಎಂದು ಶುಕ್ರವಾರ ಪ್ರಕಟಿಸಿದೆ.

           ಕೋವಿಡ್‍ ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬದಲಾಯಿಸಿ ಎರಡು ಅವಧಿಗಳಿಗೆ ವಿಂಗಡಿಸಲಾಗಿದ್ದು, ಪ್ರತಿ ಅವಧಿಯ ಕೊನೆಯಲ್ಲಿ ಸಿಬಿಎಸ್ ಇ ಪರೀಕ್ಷೆಗಳನ್ನು ನಡೆಸುತ್ತಿದೆ.

          ಟರ್ಮ್ I ಪರೀಕ್ಷೆಗಳು ಈಗಾಗಲೇ ಮುಗಿದಿದ್ದು, 10 ಮತ್ತು 12 ಎರಡೂ ತರಗತಿಗಳಿಗೆ ಟರ್ಮ್-II ಪರೀಕ್ಷೆಗಳು ಏಪ್ರಿಲ್ 26 ರಿಂದ ಪ್ರಾರಂಭವಾಗುತ್ತವೆ. ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಬಂದ್ ಆಗಿದ್ದನ್ನು ಗಮನದಲ್ಲಿಟ್ಟುಕೊಂಡು ಎರಡು ಪರೀಕ್ಷೆಗಳ ನಡುವೆ ಸಾಕಷ್ಟು ಅಂತರವನ್ನು ನೀಡಲಾಗಿದೆ ಎಂದು ಮಂಡಳಿ ತಿಳಿಸಿದೆ.

                  ಜೆಇಇ-ಮೇನ್ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಿದ್ಧಪಡಿಸುವಾಗ ಸಾಕಷ್ಟು ಕಾಳಜಿ ವಹಿಸಲಾಗಿದೆ. ಯಾವುದೇ ಎರಡು ವಿಷಯಗಳ ಪರೀಕ್ಷೆಗಳು ಒಂದೇ ದಿನಾಂಕದಂದು ಬರದಂತೆ ನೋಡಿಕೊಳ್ಳಲಾಗಿದೆ ಸಿಬಿಎಸ್ ಇ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries