HEALTH TIPS

10ನೇ ತರಗತಿ: ಮೊದಲ ಹಂತದ ಪರೀಕ್ಷಾ ಫಲಿತಾಂಶ ಶಾಲೆಗಳಿಗೆ ರವಾನೆ - ಸಿಬಿಎಸ್‌ಇ

        ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ(ಸಿಬಿಎಸ್‌ಇ) ಪಠ್ಯಕ್ರಮದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಮೊದಲ ಹಂತದ ಪರೀಕ್ಷಾ ಫಲಿತಾಂಶವನ್ನು ಆಯಾ ಶಾಲೆಗಳಿಗೆ ಕಳುಹಿಸಲಾಗಿದೆ ಎಂದು ಸಿಬಿಎಸ್‌ಇ ತಿಳಿಸಿದೆ.

           2022ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಪರೀಕ್ಷೆ ನಡೆಸುವುದಾಗಿ ಸಿಬಿಎಸ್‌ಇ ಕಳೆದ ವರ್ಷ ಘೋಷಣೆ ಮಾಡಿತ್ತು.

               ಆ ಪ್ರಕಾರ ಮೊದಲ ಹಂತದಲ್ಲಿ 2021ರ ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಪರೀಕ್ಷೆಗಳನ್ನು ನಡೆಸಿತ್ತು. ಈ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಶಾಲೆಗಳಿಗೆ ತಿಳಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಅಥವಾ ಪ್ರಾಕ್ಟಿಕಲ್ ಅಂಕಗಳು ಶಾಲೆಗಳ ಬಳಿಯೇ ಇದೆ ಎಂದು ಸಿಬಿಎಸ್‌ಇ ತಿಳಿಸಿದೆ. 2ನೇ ಹಂತದ ಪರೀಕ್ಷೆಗಳು ಏ.26ರಿಂದ ನಡೆಯಲಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries